ಪಣಂಬೂರು: ಯುವಕನ ಕೊಲೆ ಪ್ರಕರಣ; ಓರ್ವ ಆರೋಪಿ ಸೆರೆ
ಪಣಂಬೂರು: ಸಮುದ್ರ ಕಿನಾರೆಯ ಬಳಿ ಬಾಗಲಕೋಟೆ ಮೂಲದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ (29) ಎಂಬಾವರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವನನ್ನು ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಚೊಂಬಾಳ ಪೊಲೀಸ್ ವಾಣೆ ವ್ಯಾಪ್ತಿಯಲ್ಲಿ ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರು ತಾಲೂಕಿನ ತೋಟಬೆಂಗ್ರೆ ನಿವಾಸಿ ಧರ್ಮರಾಜ್ ಸುವರ್ಣ (50) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಧರ್ಮರಾಜ್ ಸುವರ್ಣ ಮತ್ತು ಮೃತ ಮುತ್ತು ಬಸವರಾಜ ವಡ್ಡರ್ ಯಾನೆ ಮುದುಕಪ್ಪ ಕಳೆದ ಕೆಲವು ಸಮಯ ದಿಂದ ಒಬ್ಬರಿಗೊಬ್ಬರು ಪರಿಚಯದವರಾಗಿದ್ದು, ಇತ್ತೀಚೆಗೆ ಆರೋಪಿ ಧರ್ಮರಾಜ್ ಸುವರ್ಣ ಹೊಸ ಮೊಬೈಲ್ ಖರೀದಿ ಸಿದ್ದ. ಆ ಮೊಬೈಲ್ ನ್ನು ಮೃತ ಮುತ್ತು ಬಸವರಾಜ್ ತೆಗೆದುಕೊಂಡು ವಾಪಾಸ್ ನೀಡದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿ ಆರೋಪಿ ಧರ್ಮರಾಜ್ ಮುತ್ತು ಬಸವರಾಜರಿಗೆ ಮರದ ಸೋಂಟೆಯಿಂದ ಹೊಡೆದು ಕೊಲೆ ಮಾಡಿರುವುದಾಗಿ ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಯ ಬಂಧನ ಕಾರ್ಯಾಚರಣೆ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಐ.ಪಿ.ಎಸ್. ಅವರ ಮಾರ್ಗದರ್ಶನದಂತೆ, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ ಗೋಯಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಪಿ. ದಿನೇಶ್ ಕುಮಾರ್, ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ ಕೆ. ಅವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮುಹಮ್ಮದ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗದ ಉಪ ನಿರೀಕ್ಷಕರಾದ ಶ್ರೀಕಲಾ ಕೆ.ಟಿ., ಪ್ರಾಣಶೇಖರ ಹಾಗೂ ಎ.ಎಸ್.ಐ. ಗಳಾದ ಕೃಷ್ಣ. ಬಿ.ಕೆ., ನಯನಾ ಹಾಗೂ ಹೆಚ್.ಸಿ. ಗಳಾದ ಸತೀಶ್ ಎಮ್ ಆರ್., ಸಯ್ಯದ್ ಇಂತಿಯಾಝ್, ಪ್ರೇಮಾನಂದ, ನವೀನ್ ಚಂದ್ರ, ಜೇಮ್ಸ್, ಪಿ.ಜೆ., ಸಿಪಿಸಿಗಳಾದ ಶಶಿಕುಮಾರ್, ರಾಕೇಶ್, ಮಾಣಿಕ್ ಸೋಮ್ಲಾ ನಾಯ್ಕ ಹಾಗೂ ಚಾಲಕ ಅಂಬಣ್ಣರವರು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.