ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ
ಸುರತ್ಕಲ್, ಸೆ.18: ಗಣೇಶ ಚತುರ್ಥಿ ಮತ್ತು ಮೀಲಾದುನ್ನಬಿ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ಸೋಮವಾರ ಪಥಸಂಚಲನ ನಡೆಯಿತು.
ಪಥ ಸಂಚಲನದಲ್ಲಿ ಶಸ್ತ್ರ ಸಜ್ಜಿತ ಸಿಆರ್ಪಿಎಫ್ ಜವಾನರು, ಕ್ಷಿಪ್ರ ಕಾರ್ಯಾಚರಣೆ ಪಡೆಯ ಜವಾನರು ಹಾಗೂ ಪಣಂಬೂರು ಉಪ ವಿಭಾಗದ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಎಎಸ್ಐಗಳು, ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿ ಸೇರಿ ಒಟ್ಟು 400 ಸಿಬ್ಬಂದಿ ಭಾಗವಹಿಸಿದರು.
ಪಥಸಂಚಲನವು ಕೃಷ್ಣಾಪುರ 7ನೇ ಬ್ಲಾಕ್ ನ ಫಿಝಾ ಮೈದಾನದಿಂದ ಆರಂಭಗೊಂಡು ಕಾಟಿಪಳ್ಳ ಶಂಸುದ್ದೀನ್ ವೃತ್ತವಾಗಿ ಗಣೇಶಪುರ ವರೆಗೆ ನಡೆಯಿತು.
ಪಥಸಂಚಲನದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಗುರುರಾಜ್ ಹಾಗೂ ಪಣಂಬೂರು ಉಪ ವಿಭಾಗದ ಅಧಿಕಾರಿ ಸಿಬ್ಬಂದಿ ಭಾಗವಹಿಸಿದ್ದರು.