ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 31ಕ್ಕೆ ಪ್ರತಿಭಾ ಕಾರಂಜಿ
ಉಳ್ಳಾಲ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಸಜೀಪ ಮೂಡ ಹಾಗೂ ಆದರ್ಶ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಸಜೀಪನಡು ಸಹಭಾಗಿತ್ವದಲ್ಲಿ ಆಗಸ್ಟ್ 31ರ ಗುರುವಾರ ಬೆಳಗ್ಗೆ 9 ಗಂಟೆಗೆ ಆದರ್ಶ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಉದ್ಘಾಟನಾ ಸಮಾರಂಭ ಜರುಗಲಿದೆ.
ಕಾರ್ಯಕ್ರಮದಲ್ಲಿ ಸಮೂಹ ಸಂಪನ್ಮೂಲ ಕೇಂದ್ರದ ಮುಖ್ಯಸ್ಥೆ ಶ್ರೀಮತಿ ಇಂದಿರಾ, ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್.ಎನ್.ಅಬ್ದುಲ್ ರಹಿಮಾನ್, ಗ್ರಾಮ ಪಂಚಾಯತ್ ಸದಸ್ಯರಾದ ಎಸ್ ಅಬೂಬಕ್ಕರ್ ಸಜೀಪ, ಅಬ್ದುಲ್ ಲತೀಫ್ ಬೋಳಮೆ, ಉದ್ಯಮಿ ಮ್ಯಾಕ್ಸಿ ಡಿಸೋಜ, ಶಾಲಾ ಸಂಚಾಲಕ ಮೊಹಮ್ಮದ್ ನಜೀಬ್, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಜಸೀಮ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಕ್ಲಸ್ಟರ್ ಮಟ್ಟದ ವಿವಿಧ 14 ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿಯರು ಭಾಗವಹಿಸಲಿದ್ದಾರೆಂದು ಶಾಲಾ ಮುಖ್ಯ ಶಿಕ್ಷಕಿ ವಸಂತಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story