Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ...

ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ30 Nov 2024 2:48 PM IST
share
ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ: ಡಾ.ಜಿ.ಪರಮೇಶ್ವರ್

ಮಂಗಳೂರು, ನ. 30: ಡ್ರಗ್ಸ್ ಜಾಲದ ವಿರುದ್ಧ ಸಮರ ಸಾರಲಾಗಿದ್ದು, ಪೂರೈಕೆ ಮಾಡುವ ಪೆಡ್ಲರ್ ಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಪೊಲೀಸ್ ವಸತಿಗೃಹ ಹಾಗೂ ನೂತನ ಠಾಣಾ ಕಟ್ಟಡಗಳ ಉದ್ಘಾಟನೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡುತ್ತಿದ್ದರು.

ಡ್ರಗ್ಸ್ ಹಾವಳಿ ಬಗ್ಗೆ ಸದನದಲ್ಲಿ ನಾನು ಮತ್ತು ಮುಖ್ಯಮಂತ್ರಿ ಮಾತನಾಡಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ 250 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿ ನಾಶಪಡಿಸಲಾಗಿದೆ. ಡ್ರಗ್ಸ್ ಜಾಲದ ಹಿಂದಿನ ಶಕ್ತಿಗಳನ್ನು ಮಟ್ಟ ಹಾಕುವ ಕೆಲಸ ನಡೆಯುತ್ತಿದೆ. ಈ ಜಾಲದ ಹಿಂದೆ ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಆಗಮಿಸುವ ವಿದೇಶಿ ವಿದ್ಯಾರ್ಥಿಗಳ ಕೈವಾಡವೂ ಪತ್ತೆಯಾಗುತ್ತಿದ್ದು, ಅಂತಹವರ ಬಗ್ಗೆ ಆಯಾ ದೇಶಗಳ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ಕಡೆಗಳಲ್ಲಿ ಗೂಂಡಾ ಕಾಯ್ದೆ ಹಾಕಿದ್ದು, ಈ ವಿಚಾರದಲ್ಲಿ ಯಾವುದೇ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದರು.

ಡ್ರಗ್ಸ್ ಪತ್ತೆಯಾದರೆ ಪೊಲೀಸರೇ ಹೊಣೆ

ಡ್ರಗ್ಸ್ ದಂಧೆಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸರಕಾರ ಪಣ ತೊಟ್ಟಿದೆ. ಅದಕ್ಕಾಗಿ ಪೊಲೀಸರು ಶಕ್ತಿಮೀರಿ ಶ್ರಮಿಸಬೇಕು. ಇದರ ಹೊರತೂ ಡ್ರಗ್ಸ್ ದಂಧೆ ಪತ್ತೆಯಾದರೆ ಅದಕ್ಕೆ ಆಯಾ ಠಾಣೆ ಹಾಗೂ ಸಂಬಂಧಪಟ್ಟ ಪೊಲೀಸರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವ ಡಾ.ಪರಮೇಶ್ವರ್ ಎಚ್ಚರಿಕೆ ನೀಡಿದರು.

ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ನಮ್ಮದೇ ಮಕ್ಕಳು ದಂಧೆಗೆ ಸಿಲುಕಿ ಹಾಳಾಗುತ್ತಾರೆ. ಹಾಗಾಗಿ ಶಾಲಾ ಕಾಲೇಜುಗಳಿಗೆ ಪೊಲೀಸರೇ ಭೇಟಿ ನೀಡಿ ಡ್ರಗ್ಸ್ ಸೇರಿದಂತೆ ಮಾದಕದ್ರವ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿ ತಿಂಗಳು ಪೊಲೀಸರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸೇವನೆ ವಿರುದ್ಧ ಮನವರಿಕೆ ಮಾಡಬೇಕು ಎಂದರು.

ಹಿಂದೆ ಗಾಂಜಾ ಸಾಮಾನ್ಯವಾಗಿತ್ತು. ಇದೀಗ ಅದಕ್ಕಿಂತಲೂ ಮಾರಕವಾದ ಸಿಂಥೆಟಿಕ್ಸ್ ಡ್ರಗ್ಸ್ ಜಾಲ ಹಬ್ಬುತ್ತಿದೆ. ಡ್ರಗ್ಸ್ ಸೇವನೆಯಿಂದ ಯುವ ಜನತೆ ಹಾಳಾಗುತ್ತಿದ್ದು, ನ್ಯೂರೋ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಎಲ್ಲರ ಮಕ್ಕಳೂ ನಮ್ಮ ಮಕ್ಕಳೇ ಎಂದು ತಿಳಿದುಕೊಂಡು ಪೊಲೀಸರು ಡ್ರಗ್ಸ್ ವಿರುದ್ಧ ಸಮರ ಸಾರಬೇಕು ಎಂದು ಸಚಿವರು ಹೇಳಿದರು.

ನಕ್ಸಲರು ಶರಣಾದರೆ ಒಳ್ಳೆಯದು

ವಿಕ್ರಂ ಗೌಡನ ಹತ್ಯೆ ಬಳಿಕ ನಕ್ಸಲರ ಹಾದಿ ಕಠಿಣವಾಗಿದೆ. ಆತನ ಸಹಚರರಿಗೆ ಸಮಾಜದ

ಮುಖ್ಯವಾಹಿನಿಗೆ ಬರಲು ಶರಣಾಗುವಂತೆ ಅವಕಾಶ ನೀಡಲಾಗಿದೆ. ಶರಣಾಗುವ ನಕ್ಸಲರಿಗೆ ಸರಕಾರದಿಂದಲೇ ಜೀವನಕ್ಕೆ ಪ್ಯಾಕೇಜ್ ಘೋಷಣೆ ಮಾಡಿದ್ದು, ಶರಣಾಗುವಂತೆ ನಕ್ಸಲರಿಗೆ ಅರಣ್ಯಗಳಲ್ಲಿ ಕೂಂಬಿಂಗ್ ನಿರತ ಪೊಲೀಸ್ ಪಡೆ ಆಹ್ವಾನ ನೀಡಿದೆ. ಹಾಗಾಗಿ ಶರಣಾದರೆ ನಕ್ಸಲರಿಗೆ ಒಳ್ಳೆಯದು ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ, ಸಂಪುಟ ಪುನರ್ ರಚನೆ ಕುರಿತ ಪ್ರಶ್ನೆಗೆ ಡಾ.ಪರಮೇಶ್ವರ್, ಇವೆರಡು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದರು.

ಚಂದ್ರಶೇಖರನಾಥ್ ಸ್ವಾಮೀಜಿ ವಿರುದ್ಧ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ

ಮುಸ್ಲಿಮ್ ವೋಟ್ ಬ್ಯಾನ್ ಹೇಳಿಕೆ ನೀಡಿದ ಚಂದ್ರಶೇಖರನಾಥ್ ಸ್ವಾಮೀಜಿ ವಿರುದ್ಧ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ. ಕಾನೂನಿನ ಎದುರು ನಾನು ಸೇರಿದಂತೆ ಎಲ್ಲರೂ ಸಮಾನರು. ಚಂದ್ರಶೇಖರನಾಥ್ ಸ್ವಾಮೀಜಿ ಕೂಡ ಕಾನೂನು ಎದುರು ದೊಡ್ಡವರಲ್ಲ. ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನೇ ಪೊಲೀಸ್ ಇಲಾಖೆ ಮಾಡುತ್ತದೆ. ಅವರ ಬಂಧನ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X