ಪುತ್ತೂರು: ಕೆಎಸ್ಸಾರ್ಟಿಸಿಯಿಂದ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ಸು ಪಾಸು ಮಾಹಿತಿ ವಿಶೇಷ ಕಾರ್ಯಕ್ರಮ
ಪುತ್ತೂರು: ಎಂಡೋಸಲ್ಫಾನ್ ಸಂತ್ರಸ್ಥರಿಗೆ ಕೆಎಸ್ಸಾರ್ಟಿಸಿ ವತಿಯಿಂದ ಉಚಿತ ಬಸ್ಸು ಪಾಸು ವಿತರಣೆ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿನ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಅನುಕೂಲವಾಗುವಂತೆ ವಿಶೇಷ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.9ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಡೋ ಸಂತ್ರಸ್ಥರ ಪಾಲನಾ ಕೇಂದ್ರದಲ್ಲಿ, ಆ. 10ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಆ. 11ರಂದು ಪುತ್ತೂರು ತಾಲೂಕಿನ ಕೊೈಲ ಪಂಚಾಯತ್ ಕಚೇರಿಯಲ್ಲಿ, ಆ. 12ರಂದು ಬಂಟ್ವಾಳ ತಾಲೂಕಿನ ವಿಟ್ಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಾಗೂ ಆ.16ರಂದು ಸುಳ್ಯ ತಾಲೂಕಿನ ಬೆಳ್ಳಾರೆ ಕೆಸ್ಸಾರ್ಟಿಸಿ ಸಂಚಾರ ನಿಯಂತ್ರಣ ಕೇಂದ್ರದಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮವು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ತನಕ ನಡೆಯಲಿದೆ. ಈ ಸಂದರ್ಭದಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಬಸ್ಸು ಪಾಸು ವಿತರಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.