ಪುತ್ತೂರು: ಗಾಂಧಿಕಟ್ಟೆಯಲ್ಲಿ ಸ್ವಾತಂತ್ರ್ಯೋತ್ಸವ
ಪುತ್ತೂರು; ಪುತ್ತೂರು ಬಸ್ ನಿಲ್ದಾಣದ ಬಳಿಯಲ್ಲಿರುವ ಐತಿಹಾಸಿಕ ಗಾಂಧಿಕಟ್ಟೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಿತು.
ಮಹತ್ಮಾಗಾಂಧಿ ಭೇಟಿಕೊಟ್ಟು ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಈ ಐತಿಹಾಸಿಕ ಸ್ಥಳದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಹಾರಾರ್ಪಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಧ್ವಜಾರೋಹಣ ನಡೆಸಿ ನಾಡಿಗೆ ಸಂದೇಶ ನೀಡಿದರು.
ಉಪವಿಭಾಗಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಶಿವಶಂಕರ್, ನಗರಪೌರಾಯಕ್ತ ಮಧು ಎಸ್ ಮನೋಹರ್, ಗಾಂಧೀಕಟ್ಟೆ ಸಮಿತಿಯ ಸಯ್ಯದ್ ಕಮಲ್, ಸೀತಾರಾಮ ಶೆಟ್ಟಿ, ಕೈಗಾರಿಕಾ ಸಂಘದ ಕಾರ್ಯದರ್ಶಿ ಉಲ್ಲಾಸ್ ಪೈ, ಲ್ಯಾನ್ಸಿ ಮಸ್ಕರೇನಸ್, ಸೀತಾ ಭಟ್, ಅಸ್ಮಾ ಗಟ್ಟಿಮನೆ, ದಾಮೋದರ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು. ಗಾಂಧೀ ಕಟ್ಟೆ ಸಮಿತಿ ಸಂಚಾಲಕ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ನ್ಯಾಯವಾದಿ ಸಾಹಿರಾ ಝುಬೈರ್ ವಂದಿಸಿದರು.
Next Story