ಮೇ 24ರವರೆಗೆ ಕರಾವಳಿಯಲ್ಲಿ ಉತ್ತಮ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಮಂಗಳೂರು: ಸದ್ಯದ ಪ್ರತಿಕೂಲ ಹವಾಮಾನದಂತೆ ಬಳಿಕ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವಡೆ ಮೇ 24ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಮುಂಗಾರು ಆಗಮಿಸುವ ವರದಿಗಳಿದ್ದರೂ ಆರಂಭಿಕ ದುರ್ಬಲತೆ ಇದ್ದರೆ ರಾಜ್ಯಕ್ಕೆ ಮುಂಗಾರು ಪ್ರವೇಶ ತಡವಾಗಬಹುದು ಎಂದು ಎಂದು ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.
ರವಿವಾರ ಮುಂಜಾನೆ ಜಿಲ್ಲೆಯ ವಿವಿಧೆಡೆ ಮಳೆಯಾಗಿದ್ದು, ಆ ಬಳಿಕ ತಣ್ಣನೆಯ ವಾತಾವರಣವಿತ್ತು. ಗಾಳಿಯ ಪ್ರಮಾಣ ತುಸು ಹೆಚ್ಚಾಗಿದ್ದುದರಿಂದ ಸಮುದ್ರವೂ ಪ್ರಕ್ಷುಬ್ದಗೊಂಡಿತ್ತು. ಜಿಲ್ಲೆಯಲ್ಲಿ ರವಿವಾರ ಸರಾಸರಿ 30.2 ಡಿಗ್ರಿ ಗರಿಷ್ಠ, 24.1 ಡಿಗ್ರಿ ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Next Story