ಯಕ್ಷಾಂಗಣ ರಾಜ್ಯೋತ್ಸವ ಗೌರವ ಪ್ರಶಸ್ತಿಗಳಿಗೆ ಆಯ್ಕೆ
ಯಾದವ ಕೋಟ್ಯಾನ್ ಪೆರ್ಮುದೆ - ಮಹಾಬಲ ಶೆಟ್ಟಿ ಕೂಡ್ಲು
ಮಂಗಳೂರು, ನ.13: ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ. ಡಾ.ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ (ರಿ) ಪುತ್ತೂರು ಇವುಗಳ ಸಹಯೋಗದೊಂದಿಗೆ ನಡೆಸುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ, ಹನ್ನೊಂದನೇ ವರ್ಷದ ನುಡಿ ಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ-2023’ವು ನವೆಂಬರ 19ರಿಂದ 25ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ಯಕ್ಷಗಾನ ಕಲಾ ಪೋಷಕರಿಗಾಗಿ ನೀಡಲಾಗುವ 2023ನೇ ಸಾಲಿನ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ಕ್ಕೆ ಉದ್ಯಮಿ, ಸಮಾಜ ಸೇವಕ ಯಾದವ ಕೋಟ್ಯಾನ್ ಪೆರ್ಮುದೆ ಮತ್ತು ಕಲಾವಿದರಿಗಾಗಿರುವ ‘ಯಕ್ಷಾಂಗಣ ಗೌರವ ಪ್ರಶಸ್ತಿ’ಗೆ ಯಕ್ಷಗಾನ ಅರ್ಥದಾರಿ ಹರಿದಾಸ ಮಹಾಬಲ ಶೆಟ್ಟಿ ಕೂಡ್ಲು ಆಯ್ಕೆಯಾಗಿದ್ದು, ಕಾರ್ಯಕ್ರಮದ ಉದ್ಘಾಟನೆ ಮತ್ತು ಸಮಾ ರೋಪ ಸಮಾರಂಭಗಳಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.