ಸಿದ್ಧಕಟ್ಟೆ: ರಾಷ್ಟೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಸಿದ್ಧಕಟ್ಟೆ: ಸ ಪ ಪೂ ಕಾಲೇಜು ಸಿದ್ಧಕಟ್ಟೆ ಇಲ್ಲಿನ ರಾಷ್ಟೀಯ ಸೇವಾ ಯೋಜನೆಯ 2023-24 ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಸ ಪ ಪೂ ಕಾಲೇಜು (ಪ್ರೌಢಶಾಲಾ ವಿಭಾಗ) ವಾಮದಪದವು ಇಲ್ಲಿ ನಡೆಯಿತು.
ಸ ಪ ಪೂ ಕಾಲೇಜು(ಪ್ರೌಢಶಾಲಾ ವಿಭಾಗ) ವಾಮದಪದವು ಇಲ್ಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತವಾರಿ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಎನ್ ಎಸ್ ಎಸ್ ಶಿಬಿರದ ಮೂಲಕ ನಾಯಕತ್ವ ಹಾಗೂ ಸೇವಾ ಮನೋಭಾವ ಗುಣದ ಮೂಲಕ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಾಲ ಭವನದ ಮಾಜಿ ಅಧ್ಯಕ್ಷರಾದ ಸುಲೋಚನ ಜಿ ಕೆ ಭಟ್, ಉದ್ಯಮಿಗಳು, ಸ ಪ ಪೂ ಕಾಲೇಜು (ಪ್ರೌಢಶಾಲಾ ವಿಭಾಗ)ವಾಮದಪದವಿನ ಸದಸ್ಯರಾದ ಪುರುಷೋತ್ತಮ ಶೆಟ್ಟಿ, ಸ ಪ ಪೂ ಕಾಲೇಜು ಸಿದ್ಧಕಟ್ಟೆ ಇಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಭಾಕರ ಪ್ರಭು, ಅಶೋಕ್ ಗಟ್ಟಿ, ಪ್ರಭಾಕರ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀಮತಿ ವಿದ್ಯಾಕುಮಾರಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸ ಪ ಪೂ ಕಾಲೇಜು ವಾಮದಪದವು ಇಲ್ಲಿನ ಪ್ರಾಂಶುಪಾಲರಾದ ಶ್ರೀಧರ್ ಹೆಚ್ ಜಿ ಇವರು ವಹಿಸಿ ಎನ್ ಎಸ್ ಎಸ್ ನ ಹುಟ್ಟು ಬೆಳೆದು ಬಂದ ಹಾದಿ ಹಾಗೂ ಅದರ ಧ್ಯೇಯೋದ್ದೇಶದ ಕುರಿತು ತಿಳಿಸಿಕೊಟ್ಟರು.
ಸ ಪ ಪೂ ಕಾಲೇಜು ಸಿದ್ಧಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಉದಯ ಕುಮಾರ್, ಸ ಪ ಪೂ ಕಾಲೇಜು ವಾಮದಪದವು ಇಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಯಶೋಧರ ಶೆಟ್ಟಿ, ವಾಮದಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಶ್ಯಾಮಪ್ರಸಾದ್ ಪೂಂಜ, ಪದವು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಬಂಗೇರ, ಸ ಪ ಪೂ ಕಾಲೇಜು(ಪ್ರೌಢಶಾಲಾ ವಿಭಾಗ) ವಾಮದಪದವಿನ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಮೇಶ್ ಶೆಟ್ಟಿ ಉಪಸ್ಥಿತರಿದ್ದರು.
ಎನ್ ಎಸ್ ಎಸ್ ಸಂಯೋಜನಾಧಿಕಾರಿ ಶೀನಪ್ಪ ಎನ್ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಹಿರಿಯ ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ್ ವಂದಿಸಿದರು. ಕನ್ನಡ ಉಪನ್ಯಾಸಕರಾದ ಸಂಜಯ್ ಬಿ ಎಸ್ ಕಾರ್ಯಕ್ರಮ ನಿರೂಪಿಸಿದರು.