ನ.11ರಂದು ಮಕ್ಕಳೊಂದಿಗೆ ಸ್ಪೀಕರ್ ಯು.ಟಿ ಖಾದರ್ ಸಂವಾದ
ಮಂಗಳೂರು, ನ.10: ರಾಜ್ಯ ಮಟ್ಟದಲ್ಲಿ ಪ್ರತಿ ವರ್ಷ ಮಕ್ಕಳ ಸಂಸತ್ ಮುಖ್ಯಮಂತ್ರಿಯೊಂದಿಗೆ ಮಕ್ಕಳ ಸಂವಾದ ನಡೆಸುತ್ತಾ ಬಂದಿದ್ದು, ಈ ಬಾರಿ ಸಂವಾದ ಕಾರ್ಯಕ್ರಮ ಬೆಂಗಳೂರಿನಲ್ಲಿ 2023 ನವೆಂಬರ್ ನಲ್ಲಿ ನಡೆಯಲಿದೆ.
ಸಂವಾದ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಪ್ರತಿ ಜಿಲ್ಲೆಯಲ್ಲಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದ್ದು, ದ.ಕ ಜಿಲ್ಲೆಯ ಮಕ್ಕಳ ಸಂಸತ್ತು ಕುರಿತು ಸಂವಾದ ಕಾರ್ಯಕ್ರಮ ನ. 11ರಂದು ಬೆಳಗ್ಗೆ 9:30 ಗಂಟೆಗೆ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶಿನಿ ನಿಲಯ ಮಂಗಳೂರು ಇಲ್ಲಿ ನಡೆಯಲಿದೆ.
ಪ್ರಮುಖವಾಗಿ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಮಕ್ಕಳ ಜೊತೆ ಸಂವಾದ ನಡೆಸಿ ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story