ಮಾಣಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ
ಮಾಣಿ ಗ್ರಾಮ ಪಂಚಾಯತ್ತಿನ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ.
ಉಪಾಧ್ಯಕ್ಷರಾಗಿ ಸುಜಾತ ಪೂಜಾರಿಯವರು ಮುಂದುವರಿಯಲಿದ್ದಾರೆ.
ಚುನಾವಣಾಧಿಕಾರಿಯಾಗಿ ಬಂಟ್ವಾಳ ಪ್ರಭಾರ ತಹಶೀಲ್ದಾರ್ ಅರವಿಂದ್ ಕೆ.ಎಮ್ ರವರು ಕಾರ್ಯ ನಿರ್ವಹಿಸಿದರು. ಉಪ ತಹಶೀಲ್ದಾರ್ ನವೀನ್ ಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ತಾಲೂಕು ಪಂಚಾಯತ್ತಿನ ಮಂಜುನಾಥ್ ಮತ್ತು ಪಂಚಾಯತ್ ಸಿಬ್ಬಂದಿ ಸಹಕರಿಸಿದರು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ನಿಕಟಪೂರ್ವಾಧ್ಯಕ್ಷ ಇಬ್ರಾಹಿಂ.ಕೆ.ಮಾಣಿ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಪ್ರೀತಿ ಡಿನ್ನಾ ಪಿರೇರಾ, ಸೀತಾ ಮತ್ತಿತರರು ಉಪಸ್ಥಿತರಿದ್ದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.