ಮುಲ್ಕಿ: ವಿಜಯ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಸುಮಲತಾ ಎನ್. ಸುವರ್ಣ ಪುನರಾಯ್ಕೆ

ಮಂಗಳೂರು, ಜು.20: ಮುಲ್ಕಿಯ ವಿಜಯ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಸುಮಲತಾ ಎನ್. ಸುವರ್ಣ ಪುನರಾಯ್ಕೆಯಾಗಿದ್ದಾರೆ.
ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಈ ಸಂಧರ್ಭದಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಸುಮಲತಾ ಎನ್. ಸುವರ್ಣ ಅವರು ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ, ಶ್ರೀಗುರು ಸೌಹಾರ್ದ ಸಹಕಾರಿ ಇದರ ಅಧ್ಯಕ್ಷೆಯಾಗಿದ್ದು, ಯಶಸ್ವಿ ಉದ್ಯಮಿ ಕೂಡಾ ಆಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story