ನೈರುತ್ಯ ಪದವೀಧರ, ಶಿಕ್ಷಕರ ಕರುಡು ಮತದಾರರ ಪಟ್ಟಿ ಬಿಡುಗಡೆ; ಡಿ.12ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ: ದ.ಕ. ಜಿಲ್ಲಾಧಿಕಾರಿ
ಮಂಗಳೂರು, ನ. 23: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಕರುಡು ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ದ.ಕ. ಜಿಲ್ಲೆಯಲ್ಲಿ ಪದವೀಧಕರ ಕ್ಷೇತ್ರದಲ್ಲಿ 14622 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 5809 ಮತದಾರರಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕರುಡು ಮತದಾರರ ಪಟ್ಟಿಗೆ ಸಂಬಂಧಿಸಿ ಡಿ. 25ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.
ಡಿ. 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದ್ದು, ಪದವೀಧರ ಹಾಗೂ ಶಿಕ್ಷಕರ ಚುನಾವಣೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ತಲಾ 14 ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದರು.
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು 1.11.202ಕ್ಕಿಂತ ಮೊದಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರಿಗೆನವೆಂಬರ್ 6ರವರೆಗೆ ಸೂಕ್ತ ದಾಖಲೆಗಳೊಂದಿಗೆ ಅವಕಾಶ ಕಲ್ಪಿಸಲಾಗಿತ್ತು. ಫಾರಂ 18ರಲ್ಲಿ ಅರ್ಹ ಮತದಾರರು ಉಚತವಾಗಿ ಹೆಸರು ನೋಂದಾಯಿಸಲು ಸಂಬಂಧಪಟ್ಟ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಶಿಕ್ಷಕರ ಮತ ಕ್ಷೇತ್ರಕ್ಕೆ ಸಂಬಂಧಿಸಿ 2023ರ ನವೆಂಬರ್ 1ಕ್ಕೆ ಮೊದಲು ಆರು ವರ್ಷದ ಅವಧಿಯಲ್ಲಿ ಕನಿಷ್ಟ ಮೂರು ವರ್ಷಗಷ್ಟು, ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಿಲ್ಲದ ನಿರ್ದಿಷ್ಟಪಡಿಸಿದ ರಾಡ್ಯದೊಲಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವವರಿಗೆ ನಮೂನೆ 19ರಲ್ಲಿ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿತ್ತು. ಮತದಾರರು ತಮ್ಮ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಮ್ಮ ವೃತ್ತಿಯ ಬಗ್ಗೆ ಪ್ರಮಾಣ ಪತ್ರವನ್ನು ಲಗತ್ತಿಸಿರಬೇಕು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಗೋಷ್ಟಿಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಉಪಸ್ಥಿತರಿದ್ದರು.