ತಾಂತ್ರಿಕ ಸಮಸ್ಯೆ| ಮಂಗಳೂರು - ದಮ್ಮಾಮ್ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಹಾರಾಟ ವಿಳಂಬ

ಮಂಗಳೂರು, ಜ.27: ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು-ದಮ್ಮಾಮ್ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಹಾರಾಟ ವಿಳಂಬವಾಗಿದೆ.
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಹೊರಡಬೇಕಾದ ವಿಮಾನವು ಗಂಟೆ 8:30 ಆಗಿದ್ದರೂ ಟೀಕ್ ಆಫ್ ಆಗಿಲ್ಲ.
ವಿಮಾನದಲ್ಲಿ 200ಕ್ಕೂ ಅಧಿಕ ಮಂದಿ ಪ್ರಯಾಣಿಕರು ಇದ್ದಾರೆ. ವಿಮಾನ ವಿಳಂಬವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ತೊಂದರೆಗೊಳಗಾಗಿದ್ದಾರೆ. ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲು ತಜ್ಞರು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಹತ್ತಿದ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು-ದಮ್ಮಾಮ್ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಆಗಾಗ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ.
Next Story