ಪ್ರಜಾತಂತ್ರ ವ್ಯವಸ್ಥೆ ಸದೃಢವಾಗಲು ಮಾಧ್ಯಮಗಳ ಪಾತ್ರ ಅನನ್ಯ: ಪ್ರೊ.ಜಯರಾಜ್ ಅಮೀನ್
ಪತ್ರಕರ್ತರ ಜಿಲ್ಲಾ ಸಮ್ಮೇಳನ ಸಮಾರೋಪ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ
ಮಂಗಳೂರು ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗೆ ಮತ್ತು ಪ್ರಜಾತಂತ್ರ ವ್ಯವಸ್ಥೆ ಸದೃಢವಾಗಿರಲು ಮಾಧ್ಯಮಗಳ ಪಾತ್ರ ಮಹತ್ತರವಾದುದು ಎಂದು ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಜಯರಾಜ್ ಅಮೀನ್ ಹೇಳಿದ್ದಾರೆ.
ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮ್ಮೆಳನದ ಸರ್ವಾಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಅದಾನಿ ಗ್ರೂಪ್ಸ್ ಅಧ್ಯಕ್ಷ ಕಿಶೋರ್ ಕುಮಾರ್ ಆಳ್ವ, ಇಂಡಿಯನ್ ಡೆಂಟಲ್ ಡೆಂಟಲ್ ಅಸೋಸಿಯೇಷನ್ ಉಪಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಭಾಗವಹಿಸಿದ್ದರು.
ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಮಹಮ್ಮದ್ ಆರಿಫ್ ಪಡುಬಿದ್ರೆ ವಂದಿಸಿದರು. ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.
ಹಿರಿಯ ಪತ್ರಕರ್ತರಿಗೆ ಸನ್ಮಾನ:ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಹಿರಿಯ ಹಾಗೂ ಸಾಧಕ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ದಿನಕರ ಇಂದಾಜೆ, ರಘುನಾಥ್ ಕಾಮತ್ ಮೂಲ್ಕಿ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ಜಗದೀಶ್ಚಂದ್ರ ಅಂಚನ್ , ಬಿ.ಸೀತಾರಾಮ ಆಚಾರ್ಯ ಮೂಡುಬಿದಿರೆ, ಪ್ರಕಾಶ್ ಇಳಂತಿಲ, ಪ್ರಕಾಶ್ ಮಂಜೇಶ್ವರ, ರಾಜೇಶ್ ಕಿಣಿ, ಉದಯ ಕುಮಾರ್ ಉಪ್ಪಿನಂಗಡಿ, ಶಶಿಧರ ಕುತ್ಯಾಳ, ದುರ್ಗಾಕುಮಾರ್ ನಾಯರ್‌ಕೆರೆ, ಜಯಪ್ರಕಾಶ್ ಕುಕ್ಕೇಟಿ, ರಾಘವೇಂದ್ರ ಅಗ್ನಿಹೋತ್ರಿ, ಪ್ರಶಾಂತ್ ಪುಂಜಾಲಕಟ್ಟೆ, ವಾಮನ ಕರ್ಕೇರ ಕೊಲ್ಲೂರು, ಶರತ್ ಶೆಟ್ಟಿ ಕಿನ್ನಿಗೋಳಿ, ಬಾಲಕೃಷ್ಣ ಕೊಯಿಲ, ರಾಜೇಶ್ ರಾವ್ ಪುತ್ತೂರು, ಅಶೋಕ್ ಶೆಟ್ಟಿ ಬಿ.ಎನ್, ಕೃಷ್ಣ ಕೋಲ್ಚಾರ್‌ರನ್ನು ಸನ್ಮಾನಿಸಲಾಯಿತು.