ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ದ.ಕ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು
ಮಂಗಳೂರು: ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಏ.4ರ ಗುರುವಾರ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಮ್ಯಾಕ್ಸಿಮ್ ಪಿಂಟೋ ಹಾಗೂ ಬಹುಜನ ಸಮಾಜವಾದಿ ಪಕ್ಷದ ( ಬಿಎಸ್ಪಿ) ಅಭ್ಯರ್ಥಿಯಾಗಿ ಕಾಂತಪ್ಪ ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ದ.ಕ. ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.
Next Story