ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿತ್ತು ಕೆಎಸ್ಸಾರ್ಟಿಸಿ ಬಸ್ಸಿನ ಟೈರ್ ಗಳು!

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನ ಎರಡು ಟೈರ್ ಗಳು ಕಳಚಿಬಿದ್ದ ಆಘಾತಕಾರಿ ಘಟನೆ ಗುರುವಾರ ಉಜಿರೆಯಲ್ಲಿ ನಡೆದಿರುವುದು ವರದಿಯಾಗಿದೆ.
ಉಜಿರೆ ಟಿ.ಬಿ. ಕ್ರಾಸ್ ಬಳಿ ಚಲಿಸುತ್ತಿದ್ದ ಸರಕಾರಿ ಬಸ್ಸಿನ ಒಂದು ಬದಿಯ ಎರಡು ಟೈರ್ ಗಳು ಕಳಚಿ ಬಿತ್ತೆನ್ನಲಾಗಿದೆ. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ತಾಲೂಕಿನಲ್ಲಿ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ಗಳ ಶೋಚನೀಯ ಸ್ಥಿತಿಯಿಂದ ಕಳೆದ ಕೆಲವು ದಿನಗಳಿಂದ ಒಂದಲ್ಲ ಒಂದು ಪ್ರಕರಣಗಳು ನಡೆಯುತ್ತಿವೆ. ಮಂಗಳವಾರ ಮುಂಡಾಜೆಯ ಸೋಮಂತಡ್ಕದಲ್ಲಿ ತಾಂತ್ರಿಕ ವೈಫಲ್ಯದಿಂದ ಕೆಎಸ್ಸಾರ್ಟಿಸಿ ಬಸ್ಸೊಂದು ಚರಂಡಿಗೆ ಬಿದ್ದ ಕಾರಣ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದರು.
Next Story