ಉಳ್ಳಾಲ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಉಳ್ಳಾಲ: ಉಳ್ಳಾಲ ಕ್ಲಸ್ಟರ್ ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬಿಎಂ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಡಲಿನ್ ಸೆರಾಲಿನ್, ಮೊಗವೀರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭವಾನಿ ಶಂಕರ್ ರನ್ನು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಸಮನ್ವಯಾಧಿಕಾರಿಗಳಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಡಾ. ಪ್ರಶಾಂತ್ ರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ಆರ್ ಈಶ್ವರ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ರಾಜೇಶ್, ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ತಹಸಿನ್, ಭಾರತ ಪ್ರೌಢಶಾಲೆ ಮುಖ್ಯ ಶಿಕ್ಷಕಿ ವಿನಯ, ಟಿಪ್ಪು ಸುಲ್ತಾನ್ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಗೀತಾ, ಮತ್ತಿತರರು ಉಪಸ್ಥಿತರಿದ್ದರು.
ಒಂಬತ್ತು ಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ಪ್ರಾರ್ಥನೆ ನೆರವೇರಿಸಿದರು. ಸೈಯದ್ ಮದನಿ ವಿದ್ಯಾ ಸಂಸ್ಥೆ ಹಳೆಕೋಟೆಯ ಮುಖ್ಯ ಶಿಕ್ಷಕ ಕೆ ಎಂ ಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ ಎಂ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯವಂತಿ ಸೋನ್ಸ್ ಸ್ವಾಗತಿಸಿದರು .ಗುಚ್ಚ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್ ವಂದಿಸಿದರು.