ಉಳ್ಳಾಲ: ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ, ವಿದ್ಯಾರ್ಥಿ ಸಂಸತ್ತು ಉದ್ಘಾಟನೆ
ಉಳ್ಳಾಲ: ಇಲ್ಲಿನ ಅನುದಾನಿತ ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ, ಶಾಲಾ ವಿದ್ಯಾರ್ಥಿ ಸಂಸತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ವನಮಹೋತ್ಸವಕ್ಕೆ ಶಾಲಾ ಅಕ್ಷರ ಕೈತೋಟದಲ್ಲಿ ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿ ಸಸಿ ನೆಡುವ ಮೂಲಕ ಉದ್ಘಾಟಿಸಿ, ಬಳಿಕ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿ ಸಂಸತ್ ಗೆ ಮಂತ್ರಿಗಳಾಗಿ ಆಯ್ಕೆಯಾದವರನ್ನು ಅಭಿನಂದಿಸಿ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಯು.ಎಚ್.ಫಾರೂಕ್ ಮಾತನಾಡಿ, ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಭವಿಷ್ಯದ ಹಾದಿಯಲ್ಲಿ ಸಹಕಾರಿ ಎಂದರು.
ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಕೋ-ಆರ್ಡಿನೇಟರ್ ಹಾಜಿ ಎಂ.ಎಚ್.ಮಲಾರ್ ವಿವಿಧ ಸಂಘಗಳ ಅಧ್ಯಕ್ಷರುಗಳಿಗೆ ಸಂಘದ ನಾಮಫಲಕಗಳನ್ನು ನೀಡುವುದರ ಮೂಲಕ ವಿವಿಧ ಸಂಘಗಳನ್ನು ಉದ್ಘಾಟಿಸಿದರು.
ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್, ಉಳ್ಳಾಲ ಕೇಂದ್ರ ಜುಮಾ ಮಸೀದಿಯ ಸದಸ್ಯರಾದ ರಫೀಕ್ ಕೋಡಿ, ಅಬೂಬಕರ್ ಕೋಟೆಪುರ ಜುಮಾ ಮಸೀದಿಯ ಅಧ್ಯಕ್ಷ ಯು.ಕೆ.ಅಬ್ಬಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯಶಿಕ್ಷಕಿ ಗೀತಾ ಡಿ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತಾಡಿದರು. ಮುಹಮ್ಮದ್ ಫಾಝಿಲ್ ಸ್ವಾಗತಿಸಿದರು. ಅಖಿಲ್ ವಂದಿಸಿದರು. ಬಿ.ಎಂ.ರಫೀಕ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.