ಉಪ್ಪಿನಂಗಡಿ: ಮಾದಕ ವಸ್ತು ಸಾಗಾಟ ಆರೋಪ; ಇಬ್ಬರ ಬಂಧನ
ಉಪ್ಪಿನಂಗಡಿ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಅವರಿಂದ 6 ಸಾವಿರ ಮೌಲ್ಯದ ಮಾದಕ ವಸ್ತು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಜತ್ತೂರು ಗ್ರಾಮದ ಲತೀಫ್ ಬಿ.ಎ. (35) ಹಾಗೂ ಕೊಕ್ಕಡ ಗ್ರಾಮದ ಬಿ. ಜುನೈದ್ (30) ಬಂಧಿತ ಆರೋಪಿಗಳು.
ಇಲ್ಲಿನ ಕೂಟೇಲು ಬಳಿ ಆ.15ರಂದು ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಸ್ಕಾರ್ಫಿಯೋ ವಾಹನವೊಂದನ್ನು ಪೊಲೀಸರು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ವಾಹನವನ್ನು ನಿಲ್ಲಿಸಿ ಅದರಲ್ಲಿದ್ದ ಇಬ್ಬರು ಪರಾರಿಯಾಗಲು ಯತ್ನಿಸಿದರು. ಇವರನ್ನು ಹಿಡಿದು ವಿಚಾರಿಸಿದಾಗ ಅವರಲ್ಲಿ ಮಾದಕ ವಸ್ತುವಾದ ಎಂಡಿಎಂಎ ಪತ್ತೆಯಾಗಿದೆ. ಇವರಿಂದ ಕೃತ್ಯಕ್ಕೆ ಬಳಸಿದ ವಾಹನ, ಎರಡು ಮೊಬೈಲ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story