Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ...

ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ ಪಾವತಿ ವಿವಾದ: ಪಿಎ ಪದವಿ ಕಾಲೇಜು ಪ್ರಾಂಶುಪಾಲರಿಂದ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ10 Dec 2024 11:22 AM IST
share
ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ ಪಾವತಿ ವಿವಾದ: ಪಿಎ ಪದವಿ ಕಾಲೇಜು ಪ್ರಾಂಶುಪಾಲರಿಂದ ಸ್ಪಷ್ಟೀಕರಣ

ಮಂಗಳೂರು, ಡಿ.10: 'ಯುಯುಸಿಎಂಎಸ್ (ಯುನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್)ನಲ್ಲಿ ಪರೀಕ್ಷಾ ಶುಲ್ಕ ಪಾವತಿಗೆ ಸಂಬಂಧಿಸಿ ತಮ್ಮ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಸೋಮವಾರ ಸುದ್ದಿಗೋಷ್ಠಿ ಕರೆದು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು' ಎಂದು ನಡುಪದವಿನ ಪಿಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಪತ್ರಿಕಾ ಪ್ರಕಟನೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ಪದವಿ ವಿದ್ಯಾರ್ಥಿನಿಯರಾದ ಆಯಿಶಾ ಹಫ್ನಾ, ರೇಷ್ನಾ ಮಿಸ್ರಿಯಾ, ಪೋಷಕರಾದ ಅಬ್ದುಲ್ ಖಾದರ್ ಮತ್ತು ವಕೀಲ ಶಹೀದ್ ಬದ್ದೂರ್ ಸುದ್ದಿಗೋಷ್ಠಿ ಆಯೋಜಿಸಿ ಪಿಎ ಕಾಲೇಜು ಮತ್ತು ವಿಶ್ವವಿದ್ಯಾನಿಲಯದ ವಿರುದ್ಧ ಆರೋಪ ಮಾಡಿರುವುದು ತಿಳಿದು ಆಘಾತಕಾರಿಯಾಗಿದೆ. ಕಾಲೇಜು ಅಧಿಕಾರಿಗಳು ಹಾಲ್ ಟಿಕೆಟ್ ನಿರಾಕರಿಸುತ್ತಿದ್ದಾರೆ ಮತ್ತು ಪ್ರಕರಣವನ್ನು ಹಿಂಪಡೆಯುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬುದು ಸುಳ್ಳು ಆರೋಪ. ಪ್ರವೇಶ ಶುಲ್ಕ ಪಾವತಿಗೆ ಸಂಬಂಧಿಸಿ ಎದುರಾಗಿದ್ದ ಸಮಸ್ಯೆಯನ್ನು ಮಂಗಳೂರು ವಿಶ್ವವಿದ್ಯಾನಿಲಯವು ಡಿಸೆಂಬರ್ 7ರಂದು ಮಧ್ಯಾಹ್ನವೇ ಪರಿಹರಿಸಿದೆ ಎಂದು ಪ್ರಾಂಶುಪಾಲ ಡಾ.ಸರ್ಫ್ರಾಝ್ ಜೆ. ಹಾಶಿಂ ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಸಂಸ್ಥೆಯ( ಪಿ.ಎ. ಪ್ರಥಮ ದರ್ಜೆ ಕಾಲೇಜು) 768 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಶುಲ್ಕವನ್ನು ಯುಯುಸಿಎಂಎಸ್ ಮೂಲಕ ಪಾವತಿಸುವಾಗ ಸಮಸ್ಯೆ ಉಂಟಾಗಿತ್ತು. ಹೊಸ ಶಿಕ್ಷಣ ನೀತಿಯ ಮೊದಲು, ಪರೀಕ್ಷಾ ಶುಲ್ಕಗಳನ್ನು ಕಾಲೇಜಿನ ಕಚೇರಿ ಸಿಬ್ಬಂದಿ ಮೂಲಕ ಸಂಗ್ರಹಿಸಿ ಅದನ್ನು ನಂತರದಲ್ಲಿ ವಿಶ್ವವಿದ್ಯಾನಿಲಯಕ್ಕೆ ತಲುಪಿಸಲಾಗುತ್ತಿತ್ತು. ಆದರೆ ಹೊಸ ಶಿಕ್ಷಣ ನೀತಿಯ ನಂತರದಲ್ಲಿ ಯುಯುಸಿಎಂಎಸ್ ತಂತ್ರಾಂಶಗಳ ಮೂಲಕ ನೇರವಾಗಿ ವಿದ್ಯಾರ್ಥಿಗಳೇ ಪರೀಕ್ಷಾ ಶುಲ್ಕ ಪಾವತಿಸಬೇಕಿದೆ ಎಂದವರು ಹೇಳಿದ್ದಾರೆ.

ಪ್ರಸಕ್ತ ಸಾಲಿನ ಪರೀಕ್ಷಾ ಶುಲ್ಕ ಪಾವತಿ ಸಮಯದಲ್ಲಿ ನಮ್ಮ ಕಾಲೇಜಿನ 27 ವಿದ್ಯಾರ್ಥಿಗಳ ಯುಯುಸಿಎಂಎಸ್ ಪೋರ್ಟಲ್ ನಲ್ಲಿ ಸ್ಟೇಟಸ್ ಅನ್ನು 'INITIATED' ಎಂದು ತೋರಿಸಲಾಗಿತ್ತು ಮತ್ತು ಅವರ ಬ್ಯಾಂಕ್ ಖಾತೆಯಿಂದ ಹಣ ಕೂಡಾ ಕಡಿತಗೊಂಡಿತ್ತು. ವಿದ್ಯಾರ್ಥಿಗಳು ಈ ವಿಷಯವನ್ನು ಕಾಲೇಜಿನ ಗಮನಕ್ಕೆ ತಂದಾಗ ಆ ಬಗ್ಗೆ ವಿಶ್ವವಿದ್ಯಾನಿಲಯಕ್ಕೆ ಮಾಹಿತಿ ನೀಡಲಾಗಿತ್ತು. ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ವಿವಿಧ ಸಂಸ್ಥೆಗಳ ಸುಮಾರು 3,000 ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ನಮಗೆ ಮಾಹಿತಿ ನೀಡಲಾಗಿತ್ತು. ಸಮಸ್ಯೆ ಎದುರಿಸಿದ ವಿದ್ಯಾರ್ಥಿಗಳ ವಿವರಗಳನ್ನು ತಿಳಿಯಲು ವಿಶ್ವವಿದ್ಯಾಲಯವು ಗೂಗಲ್ ಫಾರ್ಮ್ ಅನ್ನು ಪ್ರಸಾರ ಮಾಡಿತ್ತು ಮತ್ತು ಕಾಲೇಜುಗಳು ಫಾರ್ಮ್ ಅನ್ನು ಭರ್ತಿ ಮಾಡಿ ನೀಡಿದ್ದವು. ನಂತರ, ವಿಶ್ವವಿದ್ಯಾನಿಲಯದ ಅಧಿಕಾರಿಗಳು ನವೆಂಬರ್ 28ರಂದು ನಿಗದಿಪಡಿಸಲಾದ ಆನ್ಲೈನ್ ಸಭೆಯಲ್ಲಿ ಎಲ್ಲಾ ಕಾಲೇಜಿನ ಪ್ರಾಂಶುಪಾಲರಿಗೆ, ಮೇಲಿನ ಸಮಸ್ಯೆ ಇರುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ಯುಯುಸಿಎಂಎಸ್ ಮೂಲಕ ಇನ್ನೊಮ್ಮೆ ಪಾವತಿಸಬೇಕು( ಮೊದಲು ಪಾವತಿಯಾದ ಹಣ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಕೆಲವೇ ದಿನಗಳಲ್ಲಿ ಮರು ಜಮೆ ಮಾಡಲಾಗುವುದು) ಮತ್ತು ಇನ್ನೊಮ್ಮೆ ಪಾವತಿಸಲು ವಿಫಲರಾದ ವಿದ್ಯಾರ್ಥಿಗಳ ವಿವರ UUCMS ಡೇಟಾದಲ್ಲಿ ಪ್ರತಿಬಿಂಬಿಸದ ಕಾರಣ ಹಾಲ್ ಟಿಕೆಟ್ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದು ಸೂಚಿಸಿತ್ತು

ವಿಶ್ವವಿದ್ಯಾನಿಲಯದ ನಿರ್ದೇಶನದಂತೆ ಈ ಸೂಚನೆಯನ್ನು ವಿದ್ಯಾರ್ಥಿಗಳಿಗೂ ತಿಳಿಸಲಾಗಿತ್ತು. ಆದರೆ ಮತ್ತೆ ಪರೀಕ್ಷಾ ಶುಲ್ಕ ಪಾವತಿಸುವ ವಿಚಾರವಾಗಿ ಈ ವಿದ್ಯಾರ್ಥಿಗಳಿಂದ ಪ್ರತಿರೋಧ ವ್ಯಕ್ತವಾಗಿತ್ತು. ಕೆಲವು ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷಾಂಗ ಕುಲಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಅದರಿಂದಲೂ ತೃಪ್ತಾರಾಗದ ಕೆಲ ವಿದ್ಯಾರ್ಥಿಗಳು ಮತ್ತು ಪೋಷಕರು ಈ ವಿಷಯವನ್ನು ಸ್ಪಷ್ಟಪಡಿಸಲು ಕಾಲೇಜು ಅಧಿಕಾರಿಗಳನ್ನು ಸಂಪರ್ಕಿಸಿದಾಗ ಇದು ಪೋರ್ಟಲ್ ಸಮಸ್ಯೆ ಎಂದು ತಿಳಿಸಲಾಗಿತ್ತು. ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜಿತವಾಗಿದ್ದು, ವಿಶ್ವವಿದ್ಯಾನಿಲಯದ ಸೂಚನೆಗಳನ್ನು ಅನುಸರಿಸಿ ವಿದ್ಯಾರ್ಥಿಗಳಿಗೆ ವಿಷಯವನ್ನು ತಿಳಿಸಲಾಯಿತು. ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ನೇರವಾಗಿ ಯುಯುಸಿಎಂಎಸ್ ನ ರಾಜ್ಯ ಯೋಜನೆಗಳ ಖಾತೆಗೆ ಪಾವತಿಸುವುದು ಮತ್ತು ವಿಶ್ವವಿದ್ಯಾನಿಲಯಕ್ಕೂ ಹಾಗೂ ಕಾಲೇಜಿಗೆ ಈ ವಿಷಯದಲ್ಲಿ ಯಾವುದೇ ನಿಯಂತ್ರಣವಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿತ್ತು. ಆದರೆ ಈ ವಿಷಯದ ಬಗ್ಗೆ ತೃಪ್ತರಾಗದ ನಮ್ಮ ಕಾಲೇಜಿನ 2ನೇ ವರ್ಷದ ಬಿಎಸ್ಸಿ (ಎಫ್.ಎನ್.ಡಿ) ವಿದ್ಯಾರ್ಥಿನಿ ಆಯಿಷಾ ಹಫ್ನಾ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಾಲೇಜು ಅಕ್ರಮವಾಗಿ ಪರೀಕ್ಷಾ ಶುಲ್ಕವನ್ನು ಕೇಳುತ್ತಿದ್ದಾರೆ ಎಂದು ನಮೂದಿಸಿ ದೂರು ದಾಖಲಿಸಿದ್ದರು. ಅದೇ ದಿನ ಉಪಕುಲಪತಿಯನ್ನು ಭೇಟಿಯಾಗಿದ್ದರು. ಉಪಕುಲಪತಿ ಅವರ ಸಮಸ್ಯೆಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದರು.

ಡಿಸೆಂಬರ್ 7ರಂದು ಪಿಎ ಕಾಲೇಜು ರಿಜಿಸ್ಟ್ರಾರ್ (ಮೌಲ್ಯಮಾಪನ) ಮತ್ತು ವಿವಿ ಉಪಕುಲಪತಿ ಈ ಬಗ್ಗೆ ಮೌಖಿಕ ಸಂವಹನ ನಡೆಸಿದಾಗ ಸಮಸ್ಯೆಯನ್ನು ಪರಿಹರಿಸಿರುವುದಾಗಿ ಅವರು ಮಾಹಿತಿ ನೀಡಿದ್ದರು. ಈ ವಿಚಾರವನ್ನು ದೂರು ನೀಡಿದ್ದ ವಿದ್ಯಾರ್ಥಿನಿಯ ಪೋಷಕರನ್ನು ಅದೇ ದಿನ ದೂರವಾಣಿ ಮೂಲಕ ಸಂಪರ್ಕಿಸಿ ತಿಳಿಸಲಾಗಿತ್ತು. ಆ ವಿದ್ಯಾರ್ಥಿನಿಯರು ಹಾಗೂ ಪೋಷಕರು ಉಪಕುಲಪತಿಯನ್ನು ಭೇಟಿ ಮಾಡಿದ್ದು, ಸಮಸ್ಯೆ ಪರಿಹಾರವಾಗಿದೆ ಎಂದೂ, ಎಲ್ಲಾ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಮತ್ತು ಯುಯುಸಿಎಂಎಸ್ ಪೋರ್ಟಲ್ ನಲ್ಲಿ ಆ ಸಮಯದಲ್ಲಿ ಹಾಲ್ ಟಿಕೆಟ್ ಲಭ್ಯವಿಲ್ಲದ ಕಾರಣ ಪರೀಕ್ಷೆಯ ದಿನದಂದು ಹಾಲ್ ಟಿಕೆಟ್ (ಎಲ್ಲಾ 768 ವಿದ್ಯಾರ್ಥಿಗಳಿಗೆ) ಅನ್ನು ಪಡೆದುಕೊಳ್ಳಬಹುದು ಎಂದು ಸೂಚಿಸಿದ್ದರು. ಮತ್ತು ಕೊಟ್ಟಂತಹ ದೂರನ್ನು ಹಿಂಪಡೆಯಬಹುದೆಂದು, ಅದರ ಅವಶ್ಯಕತೆ ಇರುವುದಿಲ್ಲ ಎಂದುದಾಗಿ ತಿಳಿಸಲಾಗಿತ್ತು ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪರೀಕ್ಷಾ ಹಾಲ್ ಟಿಕೆಟ್ ಡಿಸೆಂಬರ್ 9ರಂದು ಮಧ್ಯಾಹ್ನದಿಂದ ಲಭ್ಯವಿದ್ದು, ಇದನ್ನು ಯುಯುಸಿಎಂಎಸ್ ಮೂಲಕ ವಿಶ್ವವಿದ್ಯಾನಿಲಯವು ಸಕ್ರಿಯಗೊಳಿಸಿದೆ. ಆದರೆ ವಿದ್ಯಾರ್ಥಿಗಳು ಅಧ್ಯಯನದ ಅವಧಿಯ ಮಧ್ಯದಲ್ಲಿ ಕಾಲೇಜಿಗೆ ಬರುವುದನ್ನು ತಪ್ಪಿಸುವ ಉದ್ದೇಶದಿಂದ ಪರೀಕ್ಷೆಯ ದಿನದಂದೇ ಹಾಲ್ ಟಿಕೆಟ್ ಪಡೆದುಕೊಳ್ಳ ಎಂದು ಎಲ್ಲಾ 768 ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ಮಾಹಿತಿ ನೀಡಿದ್ದೇವೆ ಎಂದು ಕಾಲೇಜು ಪ್ರಾಂಶುಪಾಲ ಡಾ.ಸರ್ಫ್ರಾಝ್ ಜೆ. ಹಾಶಿಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X