Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯಿಂದ...

ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯಿಂದ ಬೀದಿಗೆ ಬಿದ್ದ ಶಿಳ್ಳೆಕ್ಯಾತ ಕುಟುಂಬಗಳು: ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿ ಆರೋಪ

ವಾರ್ತಾಭಾರತಿವಾರ್ತಾಭಾರತಿ22 Sept 2023 9:47 PM IST
share
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯಿಂದ ಬೀದಿಗೆ ಬಿದ್ದ ಶಿಳ್ಳೆಕ್ಯಾತ ಕುಟುಂಬಗಳು: ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿ ಆರೋಪ

ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳಾರ ವಾರ್ಡಿನ ನೇತ್ರಾವತಿ ನದಿ ತೀರದಲ್ಲಿ ಕಳೆದ ಹಲವು ವರ್ಷ ಗಳಿಂದ ತೆಪ್ಪದ ಮೂಲಕ ಮೀನು ಹಿಡಿದು ಜೀವನ ಸಾಗಿಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಕುಟುಂಬ ಗಳು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯಿಂದಾಗಿ ಬೀದಿಗೆ ಬಿದ್ದಿದೆ ಎಂದು ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯು ಆರೋಪಿಸಿದೆ. ಅಲ್ಲದೆ ತಕ್ಷಣ ಈ ಕುಟುಂಬಗಳ ಗುಡಿಸಲನ್ನು ಉಳಿಸಬೇಕು ಮತ್ತು ಶಾಶ್ವತ ಮನೆಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದೆ.

ಸ್ಮಾಟ್ ಸಿಟಿ ಯೋಜನೆಯಡಿ 30 ಕೋ.ರೂ. ವೆಚ್ಚದಲ್ಲಿ ನದಿ ತೀರದಲ್ಲಿ ನಿರ್ಮಿಸಲು ಹೊರಟಿರುವ ವಾಕಿಂಗ್ ಟ್ರಾಕ್, ಸೈಕಲ್ ಟ್ರಾಕ್, ಪ್ಲೆ ಏರಿಯಾ ಇತ್ಯಾದಿ ಕಾಮಗಾರಿಗಳು ಶಿಳ್ಳೆಕ್ಯಾತ ಸಮುದಾಯದ ಗುಡಿಸಲುಗಳಿರುವ ಜಾಗದಲ್ಲೇ ನಿರ್ಮಾಣವಾಗಲಿರುವುದರಿಂದ ಈ ಸಮುದಾಯ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಬದುಕುತ್ತಿರುವ ಸಣ್ಣ ಗುಡಿಸಲುಗಳನ್ನು ಕಳೆದುಕೊಂಡು ಬೀದಿಗೆ ಬೀಳುವ ಹೀನಾಯ ಪರಿಸ್ಥಿತಿ ಉಂಟಾಗಲಿದೆ ಎಂದು ದ.ಕ.ಜಿಲ್ಲಾಡಳಿತಕ್ಕೆ ಡಿವೈಎಫ್‌ಐ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಈ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದೆ. ಶಾಶ್ವತ ಸೂರಿಗಾಗಿ ಮನೆ ನಿವೇಶನಕ್ಕೆ ಅರ್ಜಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಿಂದ ಮನೆ ಕಳೆದುಕೊಂಡು ಬೀದಿ ಪಾಲಾಗುವ ಆತಂಕದಲ್ಲಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ೮ ಗುಡಿಸಲುಗಳನ್ನು ಉಳಿಸಬೇಕು ಅಥವಾ ಪರ್ಯಾಯ ಶಾಶ್ವತ ಮನೆ ನಿರ್ಮಿಸಿ ಕೊಡಬೇಕು ಎಂದು ದ.ಕ.ಜಿಲ್ಲಾಧಿಕಾರಿ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರನ್ನು ಒತ್ತಾಯಿಸಿದೆ.

ಕರಾವಳಿ ವೃತ್ತಿನಿರತ ಅಲೆಮಾರಿ (ಶಿಳ್ಳೆಕ್ಯಾತ) ಹಕ್ಕುಗಳ ಸಮಿತಿ ಹಾಗೂ ಸಂತ್ರಸ್ತರುಗಳ ನಿಯೋಗದಲ್ಲಿ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಬಜಾಲ್, ಅಧ್ಯಕ್ಷ ರವಿ ಟಿ.ಎನ್, ಕಾರ್ಯದರ್ಶಿ ವೆಂಕಟೇಶ್, ಸಂತ್ರಸ್ತರಾದ ದೊರೆ, ಚಿರಂಜೀವಿ, ಮಧು, ರಮೇಶ, ಮಂಗಳಾ, ಸರಳಾ, ರೇಣುಕಾ, ಲಕ್ಷ್ಮಣ, ಶಾಂತ ಕುಮಾರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X