ಯೆನೆಪೋಯ ಅಲೈಡ್ ಮತ್ತು ಹೆಲ್ತ್‌ಕೇರ್: ಪದವಿ ದಿನಾಚರಣೆ
ಕೊಣಾಜೆ:ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಯೆನೆಪೊಯ ಫ್ಯಾಕಲ್ಟಿ ಆಫ್ ಅಲೈಡ್ ಆಂಡ್ ಹೆಲ್ತ್‌ಕೇರ್ ಪ್ರೊಫೆಶನ್ಸ್ ಕಾಲೇಜಿನ ಪದವಿ ಪ್ರದಾನ ಸಮಾರಂಭವು ಮಂಗಳವಾರ ಯೆನೆಪೋಯ ಕ್ಯಾಂಪಸ್ ನ ಯೆಂಡೂರೆನ್ಸ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕದ ಅಲೈಡ್ ಮತ್ತು ಹೆಲ್ತ್‌ಕೇರ್ ಕೌನ್ಸಿಲ್‌ನ ಅಧ್ಯಕ್ಷ ಡಾ. ಇಫ್ತಿಕಾರ್ ಅಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪದವೀಧರರಿಗೆ ಪ್ರಮಾಣಪತ್ರವನ್ನು ವಿತರಿಸಿ ಮಾತನಾಡಿದರು.
ಪದ್ಮಶ್ರೀ ಸಮೂಹ ಸಂಸ್ಥೆಗಳ ನಿರ್ದೇಶಕ ಪ್ರೊ.ರಾಜೇಶ್ ಶೆಣೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವೈದ್ಯಕೀಯ ಶಿಕ್ಷಣವು ನಮ್ಮ ಜೀವನದಲ್ಲಿ ಮಹತ್ತರವಾದ ಸಾಧನೆಗೆ ಅವಕಾಶವನ್ನು ಒದಗಿಸಿಕೊಡುತ್ತದೆ ಎಂದರು.
ಸಮಾರಂಭದಲ್ಲಿ ಯೆನೆಪೋಯ ಪರಿಗಣಿತ ವಿವಿಯ ಉಪಕುಲಪತಿ ಡಾ.ಬಿ.ಎಚ್ .ಶ್ರೀಪತಿರಾವ್ ಭಾಗವಹಿಸಿದ್ದರು.
ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ ಡೀನ್ ಡಾ.ಸುನೀತಾ ಸಲ್ಡಾನ್ಹಾ ಸ್ವಾಗತಿಸಿ, ಯೆನೆಪೋಯ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಲೂರ್ಧುರಾಜ್ ವಂದಿಸಿದರು.
ಸಮಾರಂಭದಲ್ಲಿ ವಿವಿಧ ಅಲೈಡ್ ಹೆಲ್ತ್‌ಕೇರ್ ವಿಭಾಗಗಳಲ್ಲಿ ಪದವಿಗಳನ್ನು ಪಡೆದ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರಗಳನ್ನು ಪಡೆದರು.