ಪರೀಕ್ಷಾ ಸಮಗ್ರತೆಗೆ ಧಕ್ಕೆ | ನಿನ್ನೆ ನಡೆದಿದ್ದ UGC-NET ಪರೀಕ್ಷೆ ರದ್ದು
PC : hindustandtimes.com
ಹೊಸದಿಲ್ಲಿ : ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿದೆ ಎಂದು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ನೀಡಿದ ಪ್ರಾಥಮಿಕ ಮಾಹಿತಿಯಂತೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಿನ್ನೆ(ಜೂ.18) ನಡೆದಿದ್ದ UGC-NET ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಬುಧವಾರ ಪ್ರಕಟಿಸಿದೆ.
“ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ" ಎಂದು ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
"ಹೊಸತಾಗಿ NET ಪರೀಕ್ಷೆಯನ್ನು ನಡೆಸಲಾಗುವುದು. ಈ ಬಗ್ಗೆ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಲಾಗುವುದು. ಸಮಗ್ರ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗುತ್ತಿದೆ” ಎಂದು ಸಚಿವಾಲಯ ತಿಳಿಸಿದೆ.
ದೇಶದ 317 ನಗರಗಳಲ್ಲಿ 11.21 ಲಕ್ಷಕ್ಕೂ ಹೆಚ್ಚು ನೋಂದಾಯಿತ ಅಭ್ಯರ್ಥಿಗಳಲ್ಲಿ ಸುಮಾರು ಶೇ.81ರಷ್ಟು ಅಭ್ಯರ್ಥಿಗಳು NET ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಯುಜಿಸಿ ಅಧ್ಯಕ್ಷ ಎಂ ಜಗದೇಶ್ ಕುಮಾರ್ ಹೇಳಿದ್ದಾರೆ.