ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ : 400 ಭಕ್ತರಿಗೆ ಗಾಯ, ಓರ್ವ ಮೃತ್ಯು
Photo : PTI
ಭುವನೇಶ್ವರ : ಒಡಿಶಾದ ಪುರಿ ಐತಿಹಾಸಿಕ ಜಗನ್ನಾಥ ರಥಯಾತ್ರೆಯಲ್ಲಿ ಉಂಟಾದ ಕಾಲ್ತುಳಿತದಿಂದ 400ಕ್ಕೂ ಹೆಚ್ಚು ಭಕ್ತರು ಗಾಯಗೊಂಡು, ಓರ್ವ ಮೃತಪಟ್ಟ ಘಟನೆ ವರದಿಯಾಗಿದೆ.
ರಥವನ್ನು ಎಳೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ಈ ವೇಳೆ ಭಕ್ತರು ಕೆಳಗೆ ಬಿದ್ದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರು ಎಂದು ತಿಳಿದು ಬಂದಿದೆ.
Next Story