ಎನ್ ಡಿ ಎ ಸರಕಾರ ರಚನೆಯಾದರೆ ಹಜ್ ಯಾತ್ರೆಗೆ 1 ಲಕ್ಷ ನೆರವು : ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು | PC: PTI
ಅಮರಾವತಿ: ಆಂಧ್ರಪ್ರದೇಶದಲ್ಲಿ ಟಿಡಿಪಿ, ಬಿಜೆಪಿ ಮತ್ತು ಜನಸೇನೆಯ ಎನ್ಡಿಎ ಸರ್ಕಾರ ರಚನೆಯಾದ ಕೂಡಲೇ ಮೆಕ್ಕಾಗೆ ಹಜ್ ಯಾತ್ರೆಗೆ ತೆರಳುವ ಮುಸ್ಲಿಮರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ರವಿವಾರ ಭರವಸೆ ನೀಡಿದ್ದಾರೆ.
ನೆಲ್ಲೂರಿನಲ್ಲಿ ಮುಸ್ಲಿಂ ಸಮುದಾಯದೊಂದಿಗಿನ ಸಂವಾದದಲ್ಲಿ ಮಾತನಾಡಿದ ತೆಲುಗುದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಈ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಟಿಡಿಪಿ ಎನ್ಡಿಎ ಭಾಗವಾಗಿತ್ತು. ಮುಸ್ಲಿಂ ಸಮುದಾಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ನಾಯ್ಡು ಹೇಳಿದ್ದಾರೆ.
ವೈಎಸ್ಆರ್ಸಿಪಿ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಕಳೆದ 5 ವರ್ಷಗಳಲ್ಲಿ ಒಂದೇ ಒಂದು ಮಸೀದಿಯನ್ನು ನಿರ್ಮಿಸಲು ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದ ಅವರು, ಟಿಡಿಪಿ ಹೈದರಾಬಾದ್ನಲ್ಲಿ ಉರ್ದು ವಿಶ್ವವಿದ್ಯಾಲಯವನ್ನು ಸ್ಥಾಪಿಸಿದೆ ಎಂದರು.