ಕೇಂದ್ರ ಗೃಹ ಸಚಿವರ ತನಿಖಾ ವಿಭಾಗದ ಶ್ರೇಷ್ಠ ಪದಕಕ್ಕೆ 140 ಪೊಲೀಸ್ ಅಧಿಕಾರಿಗಳು ಆಯ್ಕೆ
Photo: PTI
ಹೊಸದಿಲ್ಲಿ: ಕೇಂದ್ರೀಯ ತನಿಖಾ ದಳದ (ಸಿಬಿಐ) 15 ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಯ 12 ಸೇರಿದಂತೆ 140 ಪೊಲೀಸ್ ಅಧಿಕಾರಿಗಳನ್ನು ಈ ವರ್ಷದ ಕೇಂದ್ರ ಗೃಹ ಸಚಿವರ ತನಿಖಾ ವಿಭಾಗದ ಶ್ರೇಷ್ಠ ಪದಕಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಶನಿವಾರ ಪ್ರಕಟಿಸಿದೆ.
140 ಮಂದಿಯಲ್ಲಿ 2020 ರಲ್ಲಿ ನಡೆದ ಈಶಾನ್ಯ ದಿಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದ ತನಿಖೆಗಾಗಿ ದಿಲ್ಲಿ ಪೊಲೀಸ್ ನ ಒಬ್ಬ ಡಿಸಿಪಿ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ.
“ಪ್ರಶಸ್ತಿ ಪುರಸ್ಕೃತರಲ್ಲಿ 22 ಮಹಿಳಾ ಅಧಿಕಾರಿಗಳು ಸೇರಿದ್ದಾರೆ. ತನಿಖೆಯಲ್ಲಿ ಉನ್ನತ ವೃತ್ತಿಪರ ಮಾನದಂಡಗಳನ್ನು ಉತ್ತೇಜಿಸುವ ಹಾಗೂ ತನಿಖೆಯಲ್ಲಿ ಶ್ರೇಷ್ಠತೆಯನ್ನು ಗುರುತಿಸುವ ಉದ್ದೇಶದಿಂದ 2018 ರಲ್ಲಿ ಪದಕವನ್ನು ಸ್ಥಾಪಿಸಲಾಗಿದೆ. ಇದನ್ನು ಪ್ರತಿ ವರ್ಷ ಆಗಸ್ಟ್ 12 ರಂದು ಘೋಷಿಸಲಾಗುತ್ತದೆ" ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
Next Story