Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Fact Check: ಭೂಮಿಗೆ ಸುರಕ್ಷಿತವಾಗಿ...

Fact Check: ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನಿತಾ ವಿಲಿಯಮ್ಸ್ ಎಂದು 2024 ರ ವೀಡಿಯೊ ವೈರಲ್

newsmeter.innewsmeter.in20 March 2025 6:16 PM IST
share
Fact Check: ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನಿತಾ ವಿಲಿಯಮ್ಸ್ ಎಂದು 2024 ರ ವೀಡಿಯೊ ವೈರಲ್
ಸುನಿತಾ ಅವರು ಬಾಹ್ಯಾಕಾಶದಿಂದ ಹಿಂದಿರುಗುತ್ತಿರುವಾಗ, ಶೂನ್ಯ-ಗುರುತ್ವಾಕರ್ಷಣೆಯ ಪ್ರದೇಶವನ್ನು ಪ್ರವೇಶಿಸಿ ನೃತ್ಯ ಮಾಡುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭೂಮಿಗೆ ಹಿಂದಿರುಗಿದ ಸಂದರ್ಭದ ವೀಡಿಯೊ ಇದು ಎಂದು ಅನೇಕರು ಹೇಳಿಕೊಳ್ಳುತ್ತಿದ್ದಾರೆ.

Claim:ವೈರಲ್ ವೀಡಿಯೊವು ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮಾರ್ಚ್ 19, 2025 ರಂದು ಭೂಮಿಗೆ ಹಿಂದಿರುಗುವುದನ್ನು ತೋರಿಸುತ್ತದೆ.

Fact:ಈ ವೀಡಿಯೊ ಜೂನ್ 2024 ರದ್ದಾಗಿದೆ. ಸುನೀತಾ ಮತ್ತು ಅವರ ಸಿಬ್ಬಂದಿ ISS ಅನ್ನು ಪ್ರವೇಶಿಸಿದ ಸಂದರ್ಭದ ವೀಡಿಯೊ ಇದಾಗಿದೆ.

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಒಂಬತ್ತು ತಿಂಗಳುಗಳನ್ನು ಕಳೆದ ನಂತರ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಬುಧವಾರ ಭೂಮಿಗೆ ಮರಳಿದರು. ಸುನಿತಾ ಜೊತೆಗೆ, ಅವರ ಸಹೋದ್ಯೋಗಿಗಳಾದ ಬುಚ್ ವಿಲ್ಮೋರ್, ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಸ್ಪೇಸ್‌ಎಕ್ಸ್‌ನ ಕ್ರೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಅವರೊಂದಿಗೆ ಮರಳಿದರು. ಕ್ರೂ ಡ್ರ್ಯಾಗನ್ ಕ್ಯಾಪ್ಸುಲ್ ಬುಧವಾರ ಭಾರತೀಯ ಕಾಲಮಾನ ಬೆಳಗಿನ ಜಾವ 3:27 ಕ್ಕೆ ಫ್ಲೋರಿಡಾದ ತಲ್ಲಹಸ್ಸಿ ಕರಾವಳಿಯ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು.

ಇದೀಗ ಸುನಿತಾ ಅವರು ಬಾಹ್ಯಾಕಾಶದಿಂದ ಹಿಂದಿರುಗುತ್ತಿರುವಾಗ, ಶೂನ್ಯ-ಗುರುತ್ವಾಕರ್ಷಣೆಯ ಪ್ರದೇಶವನ್ನು ಪ್ರವೇಶಿಸಿ ನೃತ್ಯ ಮಾಡುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭೂಮಿಗೆ ಹಿಂದಿರುಗಿದ ಸಂದರ್ಭದ ವೀಡಿಯೊ ಇದು ಎಂದು ಅನೇಕರು ಹೇಳಿಕೊಳ್ಳುತ್ತಿದ್ದಾರೆ.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಮಾರ್ಚ್ 19, 2025 ರಂದು ಹಂಚಿಕೊಂಡಡು, ‘‘ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಹಾಗೂ ನಾಸಾ ವಿಜ್ಞಾನಿ, ಗಗನಯಾತ್ರಿ ಬುಚ್‌ ವಿಲ್ಮೋರ್ ಅವರು ಕಳೆದ 9 ತಿಂಗಳಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲೇ ಇದ್ದರು. ತಾಂತ್ರಿಕ ಸಮಸ್ಯೆಯಿಂದ ಅವರು ಭೂಮಿಗೆ ಬರಲು ಸಾಧ್ಯವಾಗಿರಲಿಲ್ಲ. ಕಡೆಗೂ ಅವರ ಬಾಹ್ಯಾಕಾಶ ವಾಸ ಮುಗಿದಿದ್ದು ಭೂಮಿಗೆ ಸುರಕ್ಷಿತವಾಗಿ ವಾಪಾಸಾಗಿದ್ದಾರೆ’’ ಎಂದು ಬರೆದುಕೊಂಡಿದ್ದಾರೆ.

ಇದೇರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ನ್ಯೂಸ್ ಮೀಟರ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವಾಸ್ತವವಾಗಿ ಈ ವೀಡಿಯೊ ಜೂನ್ 2024 ರದ್ದಾಗಿದೆ. ಸುನೀತಾ ಮತ್ತು ಅವರ ಸಿಬ್ಬಂದಿ ವಿಲ್ಮೋರ್ ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಅನ್ನು ಪ್ರವೇಶಿಸಿದ ಸಂದರ್ಭದ ವೀಡಿಯೊ ಇದಾಗಿದೆ.

ನಿಜಾಂಶವನ್ನು ತಿಳಿಯಲು ನಾವು ವೈರಲ್ ವೀಡಿಯೊದ ಸ್ಕ್ರೀನ್ ಶಾಟ್ ತೆಗೆದುಕೊಂಡು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದ್ದೇವೆ. ಆಗ ಬೋಯಿಂಗ್ ಸ್ಪೇಸ್​ನ ಅಧಿಕೃತ ಎಕ್ಸ್ ಹ್ಯಾಂಡಲ್, ಇದು ಜೂನ್ 07, 2024 ರಂದು ಇದೇ ವೈರಲ್ ವೀಡಿಯೊವನ್ನು ಉತ್ತಮ ಕ್ವಾಲಿಟಿಯಲ್ಲಿ ಅಪ್‌ಲೋಡ್ ಮಾಡಿರುವುದು ಕಂಡುಬಂತು.

‘‘Hugs all around! The Expedition 71 crew greets Butch Wilmore and @Astro_Suni aboard @Space_Station after #Starliner docked at 1:34 p.m. ET on June 6.’’ ಎಂದು ಈ ವೀಡಿಯೊಕ್ಕೆ ಶೀರ್ಷಿಕೆ ನೀಡಲಾಗಿದೆ. ಇದು ವೀಡಿಯೊವು ವಾಸ್ತವವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಅವರ ಆಗಮನವನ್ನು ತೋರಿಸುತ್ತದೆ.

ಜೂನ್ 07, 2024 ರಂದು NDTV ಪ್ರಾಫಿಟ್‌ನ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದ ಇದೇ ವೈರಲ್ ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ. ಈ ವೀಡಿಯೊಗೆ ‘‘ISS ತಲುಪಿದ ನಂತರ NASA ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರ ವಿಜಯ ನೃತ್ಯ’’ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.

ANI ಕೂಡ ಜೂನ್ 7, 2024 ರಂದು ಇದೇ ವೈರಲ್ ವೀಡಿಯೊವನ್ನು ಹಂಚಿಕೊಂಡು ಸುದ್ದಿ ಪ್ರಕಟಿಸಿದೆ. ‘‘ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಶುಕ್ರವಾರ ಬೆಳಿಗ್ಗೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಪ್ರವೇಶಿಸಿದ್ದಾರೆ. ನಾಸಾದ ದೃಶ್ಯಗಳು ಗುರುವಾರ ಮಧ್ಯಾಹ್ನ 3:46 ET ಕ್ಕೆ (ಶುಕ್ರವಾರ ಬೆಳಿಗ್ಗೆ IST) ಇಬ್ಬರು ನಾಸಾ ಗಗನಯಾತ್ರಿಗಳು ಯುಎಸ್‌ಎಸ್‌ನ ಹ್ಯಾಚ್ ಬಾಗಿಲಿನ ಮೂಲಕ ಪ್ರವೇಶಿಸುತ್ತಿರುವುದನ್ನು ತೋರಿಸಿದೆ. ಐಎಸ್‌ಎಸ್‌ನಲ್ಲಿರುವ ಎಕ್ಸ್‌ಪೆಡಿಶನ್ 71 ಸಿಬ್ಬಂದಿಯ ಏಳು ಗಗನಯಾತ್ರಿಗಳು ಬೋಯಿಂಗ್‌ನ ಹೊಸ ಕ್ಯಾಪ್ಸುಲ್‌ನಲ್ಲಿ ಹಾರಿದ ಮೊದಲ ಗಗನಯಾತ್ರಿಗಳಾದ ಸುನೀತಾ ಮತ್ತು ಬುಚ್ ಅವರನ್ನು ಸ್ವಾಗತಿಸಿದರು’’ ಎಂದು ಬರೆದುಕೊಂಡಿದೆ.

ಈ ಮೂಲಕ ಸದ್ಯ ವೈರಲ್ ಆಗುತ್ತಿರುವ ವೀಡಿಯೊ ಇತ್ತೀಚಿನದಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಜೂನ್ 2024 ರಲ್ಲಿ ಸುನೀತಾ ವಿಲಿಯಮ್ಸ್ ಮತ್ತು ಅವರ ಸಹೋದ್ಯೋಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಪ್ರವೇಶಿಸುವುದನ್ನು ತೋರಿಸುತ್ತದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

Claim Review:ವೈರಲ್ ವೀಡಿಯೊವು ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮಾರ್ಚ್ 19, 2025 ರಂದು ಭೂಮಿಗೆ ಹಿಂದಿರುಗುವುದನ್ನು ತೋರಿಸುತ್ತದೆ.

Claimed By:Facebook User

Claim Reviewed By:NewsMeter

Claim Source:Social Media

Claim Fact Check:False

Fact:ಈ ವೀಡಿಯೊ ಜೂನ್ 2024 ರದ್ದಾಗಿದೆ. ಸುನೀತಾ ಮತ್ತು ಅವರ ಸಿಬ್ಬಂದಿ ISS ಅನ್ನು ಪ್ರವೇಶಿಸಿದ ಸಂದರ್ಭದ ವೀಡಿಯೊ ಇದಾಗಿದೆ.

ಈ ಲೇಖನವನ್ನು ಮೊದಲು 'newsmeter.in' ಪ್ರಕಟಿಸಿದೆ. ʼಶಕ್ತಿ ಕಲೆಕ್ಟಿವ್‌ʼನ ಭಾಗವಾಗಿ ವಾರ್ತಾ ಭಾರತಿ ಪ್ರಕಟಿಸಿದೆ.

share
newsmeter.in
newsmeter.in
Next Story
X