ಆಂಧ್ರಪ್ರದೇಶ | ಪಟಾಕಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ : ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಮಂದಿ ಮೃತ್ಯು

ಸಾಂದರ್ಭಿಕ ಚಿತ್ರ
ವಿಶಾಖಪಟ್ಟಣಂ : ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ರವಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವೆ ವಿ ಅನಿತಾ, ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಯ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Next Story