ದಿಲ್ಲಿ ವಿಧಾನಸಭಾ ಚುನಾವಣೆ | 15 ಗ್ಯಾರಂಟಿಗಳನ್ನೊಳಗೊಂಡ ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

Photo credit:X/@ArvindKejriwal
ಹೊಸದಿಲ್ಲಿ: ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಗೆ ವಿವಿಧ ಸಾಮಾಜಿಕ, ಆರ್ಥಿಕ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಗುರಿಯಾಗಿಸಿಕೊಂಡು 15 ಗ್ಯಾರಂಟಿಗಳಿರುವ ಪ್ರಣಾಳಿಕೆಯನ್ನು ಸೋಮವಾರ ಆಪ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಿಡುಗಡೆ ಮಾಡಿದ್ದಾರೆ.
ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅರವಿಂದ್ ಕೇಜ್ರಿವಾಲ್, ಆಪ್ ಪಕ್ಷವು ದಿಲ್ಲಿ ನಿವಾಸಿಗಳು, ನಿರ್ದಿಷ್ಟವಾಗಿ ಯುವಕರು ಹಾಗೂ ಮಹಿಳೆಯರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಘೋಷಿಸಿದರು.
ದಿಲ್ಲಿಯ ಯುವ ಜನತೆಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುವುದು ಎಂಬುದು ಈ ಪ್ರಣಾಳಿಕೆಯ ಮುಖ್ಯ ಭರವಸೆಯಾಗಿದೆ.
ಅಲ್ಲದೆ, ದಿಲ್ಲಿ ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಮಹಿಳಾ ಸಮ್ಮಾನ ಯೋಜನೆಯನ್ನು ಮುಂದುವರಿಸುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
Next Story