ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತೊರೆಯಬೇಕು: ಲಾಲೂ ಪ್ರಸಾದ್ ಯಾದವ್ ವಾಗ್ದಾಳಿ
ಲಾಲೂ ಪ್ರಸಾದ್ ಯಾದವ್ (Photo: PTI)
ಪಾಟ್ನಾ : ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತೊರೆಯಬೇಕು ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಗದ್ದಲದ ನಡುವೆ ಲಾಲೂ ಪ್ರಸಾದ್ ಯಾದವ್ ಅವರು ಗುರುವಾರ ಈ ಹೇಳಿಕೆ ನೀಡಿದ್ದಾರೆ.
ಮಂಗಳವಾರ ರಾಜ್ಯಸಭೆಯಲ್ಲಿ ಸಂವಿಧಾನದ ಚರ್ಚೆಯ ವೇಳೆ ಮಾತನಾಡಿದ ಕೇಂದ್ರ ಗೃಹ ಸಚಿವರು, ಅಂಬೇಡ್ಕರ್ ಅವರ ಹೆಸರನ್ನು ತೆಗೆದುಕೊಳ್ಳಲು ಕಾಂಗ್ರೆಸ್ಗೆ "ಫ್ಯಾಶನ್" ಎಂದು ಹೇಳಿದ ನಂತರ ಲಾಲು ಪ್ರಸಾದ್ ಯಾದವ್ ಅವರು ಅಮಿತ್ ಶಾ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
"ಅಮಿತ್ ಶಾ ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೇಲೆ ದ್ವೇಷವಿರಬೇಕು. ಅವರ ಈ ಹುಚ್ಚುತನವನ್ನು ನಾನು ಖಂಡಿಸುತ್ತೇವೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಶ್ರೇಷ್ಠರು. ಅಮಿತ್ ಶಾ ರಾಜಕೀಯವನ್ನು ತ್ಯಜಿಸಿ ಹೊರಹೋಗಬೇಕು," ಎಂದು ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.