ನೀಟ್-ಪಿಜಿ ಪರೀಕ್ಷೆ ಮುಂದೂಡುವಂತೆ ಕೋರಿ ಅರ್ಜಿ| ನಾಳೆ ಸುಪ್ರೀಂ ಕೋರ್ಟ್ ನಿಂದ ವಿಚಾರಣೆ
ಸುಪ್ರೀಂ ಕೋರ್ಟ್ | PTI
ಹೊಸದಿಲ್ಲಿ: ಆಗಸ್ಟ್ 11ರಂದು ನಡೆಯಲಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಪರೀಕ್ಷೆ ಬರೆಯಲು ನಿಗದಿಪಡಿಸಲಾದ ಪರೀಕ್ಷಾ ಕೇಂದ್ರಗಳು ಇರುವ ನಗರಕ್ಕೆ ತೆರಳು ಅಭ್ಯರ್ಥಿಗಳಿಗೆ ಅನಾನುಕೂಲವಾಗುತ್ತಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.
ಈ ವಿಷಯದ ಕುರಿತಂತೆ ವಕೀಲ ಅನಸ್ ತನ್ವೀರ್ ಅವರ ಪ್ರತಿಪಾದನೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿಪಾಲ, ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ ಗುರುವಾರ ವಿಚಾರಣೆಗೆ ಎತ್ತಿಕೊಂಡಿತು.
ಪ್ರಕರಣದ ವಿಚಾರಣೆಯನ್ನು ಶುಕ್ರವಾರ ನಡೆಸಲಾಗುವುದು ಎಂದು ಪೀಠ ತಿಳಿಸಿತು.
Next Story