ದಿಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ
Photo: NDTV
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ. ದಿಲ್ಲಿ ಲೆ.ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರನ್ನು ಭೇಟಿ ಮಾಡಿ ಅರವಿಂದ್ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ದಿಲ್ಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ 6 ತಿಂಗಳ ಜೈಲುವಾಸದ ಬಳಿಕ ಕೇಜ್ರಿವಾಲ್ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದರು. ರವಿವಾರ ದಿಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ 48 ಗಂಟೆಗಳಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
ಇಂದು ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಶಾಸಕಿ ಅತಿಶಿ ಅವರನ್ನು ಆಯ್ಕೆ ಮಾಡಲಾಗಿತ್ತು.
Next Story