ಇರಾನ್ ಗೆ ಅನಗತ್ಯ ಪ್ರವಾಸ ಬೇಡ: ಯುದ್ಧ ಪರಿಸ್ಥಿತಿ ಹಿನ್ನೆಲೆ ಭಾರತೀಯರಿಗೆ ಕೇಂದ್ರ ಸರಕಾರ ಸಲಹೆ
ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ (Photo: PTI)
ಹೊಸದಿಲ್ಲಿ: ಇಸ್ರೇಲ್ ಮೇಲೆ ಇರಾನ್ ಭಾರಿ ಪ್ರಮಾಣದ ಕ್ಷಿಪಣಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಗತ್ಯ ಪ್ರವಾಸವನ್ನು ತಡೆಯುವಂತೆ ಭಾರತೀಯರಿಗೆ ಕೇಂದ್ರ ಸರಕಾರ ಸಲಹೆ ನೀಡಿದೆ. ಈಗಾಗಲೇ ಇರಾನ್ ನಲ್ಲಿರುವ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದಿರಬೇಕು ಹಾಗೂ ಟೆಹ್ರಾನ್ ನಲ್ಲಿರುವ ರಾಜತಾಂತ್ರಿಕ ಕಚೇರಿಯ ಸಂಪರ್ಕದಲ್ಲಿರಬೇಕು ಎಂದೂ ಭಾರತ ಸೂಚಿಸಿದೆ.
ಇತ್ತೀಚೆಗೆ ನಡೆದ ಹಮಾಸ್ ಮತ್ತು ಹಿಜ್ಬುಲ್ಲಾ ನಾಯಕರ ಹತ್ಯೆಗಳಿಗೆ ಪ್ರತಿಯಾಗಿ ಇರಾನ್ ದೇಶವು ಇಸ್ರೇಲ್ ಮೇಲೆ ಭಾರಿ ಪ್ರಮಾಣದ ಹೈಪರ್ ಸಾನಿಕ್ ಕ್ಷಿಪಣಿ ದಾಳಿ ನಡೆಸಿರುವುದರಿಂದ, ಮಧ್ಯಪ್ರಾಚ್ಯದಲ್ಲಿನ ಯುದ್ಧ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ.
ಈ ಪ್ರಾಂತ್ಯದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಭಾರತವು ನಿಕಟವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾಧ್ಯೆಮದಲ್ಲಿ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
Next Story