ಅಯೋಧ್ಯೆ | ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಗೂಢವಾಗಿ ಮೃತ್ಯು
ಸುರ್ಜೀತ್ ಸಿಂಗ್ ಕೊತ್ವಾಲಿ | PC : X \ @arunchahalitv
ಅಯೋಧ್ಯೆ: ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಎಡಿಎಂ) ಸುರ್ಜೀತ್ ಸಿಂಗ್ ಕೊತ್ವಾಲಿ ನಗರದ ಸುರ್ಸಾರಿ ಕಾಲೋನಿ ಸಿವಿಲ್ ಲೈನ್ ಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ತದ ಮಡುವಿನಲ್ಲಿ ಸುರ್ಜೀತ್ ಸಿಂಗ್ ಮೃತದೇಹ ಪತ್ತೆಯಾಗಿದೆ. ಘಟನೆಯ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ ಜಂಟಿ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ವಿಭಾಗೀಯ ಆಯುಕ್ತ ಗೌರವ್ ದಯಾಳ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ವಿಜಯ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಬೆಡ್ ರೂಂನಲ್ಲಿ ಸುರ್ಜೀತ್ ಸಿಂಗ್ ಅವರ ಮೃತದೇಹವನ್ನು ನೋಡಿ ಅವರ ಮನೆ ಕೆಲಸದಾಕೆ ಭದ್ರತಾ ಸಿಬ್ಬಂದಿಗೆ ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
अयोध्या एडीएम कानून सुरजीत सिंह की मौत, कमरे में पाए गए मृत, कोतवाली नगर के सुरसरि कालोनी सिविल लाइन में हुई मौत। कमिश्नर आईजी , डीएम भी मौके पर पहुंचे. #Ayodhya @Uppolice pic.twitter.com/Qbm4TDRCUu
— Arun (आज़ाद) Chahal (@arunchahalitv) October 24, 2024
ಕಾನ್ಪುರ ಮೂಲದ ಸುರ್ಜೀತ್ ಸಿಂಗ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಅವರ ಸಾವಿಗೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.