ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ; ಚಂಡಮಾರುತ ಸೃಷ್ಟಿಯ ಸಾಧ್ಯತೆ
ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ : ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಲಕ್ಕಾ ಜಲಸಂಧಿ ಪ್ರದೇಶದಲ್ಲಿ ವಾಯುಭಾರ ಕುಸಿತವುಂಟಾಗಿದ್ದು,ಅದು ಪಶ್ಚಿಮ-ವಾಯುವ್ಯದತ್ತ ಚಲಿಸುವ ಮತ್ತು ನ.29ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ಮುಂದಿನ 168 ಗಂಟೆಗಳಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಈ ಹಿನ್ನಲೆಯಲ್ಲಿ ನ.30ರವರೆಗೆ ನಿಕೋಬಾರ್ ದ್ವೀಪಸಮೂಹದ ಹೆಚ್ಚಿನ ಕಡೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು, ನ.30 ಮತ್ತು ಡಿ.1ರಂದು ಸಮುದ್ರವು ಪ್ರಕ್ಷುಬ್ಧಗೊಳ್ಳುವುದರಿಂದ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮೀನುಗಾರಿಕೆಯಿಂದ ದೂರವಿರುವಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಈಗಾಗಲೇ ಸಮುದ್ರದಲ್ಲಿರುವ ಮೀನುಗಾರರಿಗೆ ತೀರಕ್ಕೆ ಮರಳುವಂತೆ ಸೂಚಿಸಲಾಗಿದೆ
Next Story