ಬಿಲ್ಕಿಸ್ ಬಾನು ಪ್ರಕರಣ: ಆಗಸ್ಟ್ 7ರಿಂದ ಸುಪ್ರೀಂ ಕೋರ್ಟ್ ನಿಂದ ಅಂತಿಮ ವಿಚಾರಣೆ
ಬಿಲ್ಕಿಸ್ ಬಾನು | Photo : PTI
ಹೊಸದಿಲ್ಲಿ: 2002ರ ಗುಜರಾತ್ ಹತ್ಯಾಕಾಂಡದ ಸಂದರ್ಭ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಅವರ ಕುಟುಂಬದ ಸದಸ್ಯರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 11 ಆರೋಪಿಗಳ ಅವಧಿ ಪೂರ್ವ ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 7ರಂದು ನಡೆಸಲಿದೆ.
ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ, ಪ್ರಕರಣದಲ್ಲಿ ಬಿಡುಗಡೆಯಾದ ಅಪರಾಧಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಅಂಶವನ್ನು ಪರಿಗಣಿಸಿತು. ಅಂತಿಮ ವಿಚಾರಣೆಯನ್ನು ಆಗಸ್ಟ್ 7ಕ್ಕೆ ನಿಗದಿಪಡಿಸಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರೂ ಲಿಖಿತವಾಗಿ ತಮ್ಮ ವಿಚಾರವನ್ನು ಮಂಡಿಸಬೇಕು ಎಂದು ಪೀಠ ನಿರ್ದೇಶಿಸಿತು.
ನ್ಯಾಯಮೂರ್ತಿ ನಾಗರತ್ನಾ ಅವರ ಪೀಠದ ಮುಂದೆ ಈ ಪ್ರಕರಣ ವಿಚಾರಣೆಗೆ ಬರುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಜುಲೈ 11ರಂದು ಈ ಪ್ರಕರಣ ವಿಚಾರಣೆ ಬಂದಾಗ ಅವರು ಜುಲೈ 17ಕ್ಕೆ ಮುಂದೂಡಿದ್ದರು.
Next Story