ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕ ಪಿ ಸಿ ಜಾರ್ಜ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೇರಳ ಹೈಕೋರ್ಟ್

ಪಿ ಸಿ ಜಾರ್ಜ್ (PTI)
ಹೊಸದಿಲ್ಲಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಪಿ ಸಿ ಜಾರ್ಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಮಾಜಿ ಶಾಸಕ ಪಿ ಸಿ ಜಾರ್ಜ್ ಗೆ ಈ ಹಿಂದೆ ಫೆಬ್ರವರಿ 17ರವರೆಗೆ ನ್ಯಾಯಾಲಯ ಬಂಧನದಿಂದ ರಕ್ಷಣೆ ನೀಡಿತ್ತು. ಟಿವಿ ಚಾನಲ್ ಚರ್ಚೆಯ ವೇಳೆ ಮಾಜಿ ಶಾಸಕ ಪಿ ಸಿ ಜಾರ್ಜ್ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷದ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಹೊರಿಸಲಾಗಿದೆ.
ಎರಟ್ಟುಪೆಟ್ಟ ಪೊಲೀಸ್ ಠಾಣೆಯಲ್ಲಿ ಪಿ ಸಿ ಜಾರ್ಜ್ ವಿರುದ್ಧ ಮುಸ್ಲಿಂ ಯೂತ್ ಲೀಗ್ ನಾಯಕ ಮುಹಮ್ಮದ್ ಶಿಹಾಬ್ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196(1)(ಎ) ಮತ್ತು 299, ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120(ಒ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಕೊಟ್ಟಾಯಂ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆ ಪಿ ಸಿ ಜಾರ್ಜ್ ಹೈಕೋರ್ಟ್ ಮೊರೆ ಹೋಗಿದ್ದರು.
Next Story