ಸಂಸತ್ ಭದ್ರತಾ ವೈಫಲ್ಯ ಪ್ರಕರಣ: ಸಂಸದ ಪ್ರತಾಪ್ ಸಿಂಹ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದ ಸಚಿವ ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ (PTI)
BJP MP Prathap Simha's statement recorded in Parliament security breach case: Pralhad Joshi
ಹೊಸದಿಲ್ಲಿ: ಸಂಸತ್ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಲೋಕಸಭಾ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಇಂದು ಹೇಳಿದ್ದಾರೆ.
ಡಿಸೆಂಬರ್ 13ರಂದು ನಡೆದ ಈ ಘಟನೆಯ ತನಿಖೆ ನಡೆಯುತ್ತಿದೆ, ವರದಿ ಸಲ್ಲಿಕೆಯಾದ ನಂತರ ಕಾನೂನಾತ್ಮಕ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮೈಸೂರು ಕ್ಷೇತ್ರದ ಸಂಸದರಾಗಿರುವ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪ್ರಕರಣದ ಆರೋಪಿಗಳಲ್ಲೊಬ್ಬಾತನಿಗೆ ಪಾಸ್ ನೀಡಲಾಗಿತ್ತೆಂಬ ವಿಚಾರ ಸಾಕಷ್ಟು ವಿವಾದಕ್ಕೀಡಾಗಿತ್ತು.
Next Story