ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ಎಲ್.ಕೆ. ಅಡ್ವಾಣಿ (PTI)
ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅನಾರೋಗ್ಯದಿಂದ ದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಡ್ವಾಣಿ ಆರೋಗ್ಯದ ಮೇಲೆ ವೈದ್ಯರು ನಿಗಾ ಇರಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.
ನರರೋಗ ತಜ್ಞ ಡಾ.ವಿನಿತ್ ಸೂರಿ ಅವರ ನೇತೃತ್ವದಲ್ಲಿ ಅಡ್ವಾಣಿಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಜುಲೈನಲ್ಲಿ ಅಡ್ವಾಣಿ ಅವರು ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೂತ್ರ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಂಡಿದ್ದರು. ಆಗಸ್ಟ್ ನಲ್ಲೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
Next Story