ರಾಜ್ಯದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ: ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್ | Photo : PTI
ತಿರುವನಂತಪುರ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ)ಯನ್ನು ಕೇರಳದಲ್ಲಿ ಜಾರಿಗೊಳಿಸುವುದಿಲ್ಲ ಎಂಬ ನಿಲುವಿಗೆ ತನ್ನ ಸರಕಾರ ಬದ್ಧವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ.
ದೇಶಾಭಿಮಾನಿ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಒಂದು ವರ್ಗದ ನಾಗರಿಕರನ್ನು ಪ್ರತ್ಯೇಕಗೊಳಿಸುವ ಗುರಿ ಹೊಂದಿದೆ ಎಂದರು.
‘‘ಪೌರತ್ವ ತಿದ್ದುಪಡಿ ಕಾಯ್ದೆ ಶೀಘ್ರ ಜಾರಿಗೆ ಬರಲಿದೆ ಎಂಬ ಸುದ್ದಿಯನ್ನು ನಾವು ಕೇಳುತ್ತಿದ್ದೇವೆ. ಕೇರಳದಲ್ಲಿ ಸಿಎಎಯನ್ನು ಜಾರಿಗೊಳಿಸುವುದಿಲ್ಲ ಎಂದು ನಾವು ಈಗಾಗಲೇ ಹೇಳಿದ್ದೇವೆ. ಈಗಲೂ ಇದು ಎಲ್ಡಿಎಫ್ ನ ನಿಲುವಾಗಿದೆ’’ ಎಂದು ಪಿಣರಾಯಿ ವಿಜಯನ್ ಹೇಳಿದರು.
ಜಾತ್ಯತತೀತ ರಾಷ್ಟ್ರದಿಂದ ಧಾರ್ಮಿಕ ರಾಷ್ಟ್ರವಾಗಿ ಬದಲಾಯಿಸಲು ದೇಶದಲ್ಲಿ ತೀವ್ರಗತಿಯ ಪ್ರಯತ್ನಗಳು ನಡೆಯುತ್ತಿವೆ ಎಂದು ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದರು.
Next Story