ವಿವಾದಾತ್ಮಕ 'ಒಂದು ರಾಷ್ಟ್ರ ಒಂದು ಚುನಾವಣೆ' ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ
ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ಕೇಂದ್ರ ಸಚಿವ ಸಂಪುಟವು ವಿವಾದಾತ್ಮಕ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಯನ್ನು ಅಂಗೀಕರಿಸಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ’ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಿತ್ತು. ಸೆಪ್ಟಂಬರ್ ನಲ್ಲಿ ಕೋವಿಂದ್ ಸಮಿತಿ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಅಂಗೀಕರಿಸಿತ್ತು.
ಮೊದಲ ಹಂತವಾಗಿ, ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ. ಮುಂದಿನ ಹಂತದಲ್ಲಿ, ನಗರ ಪಾಲಿಕೆಗಳು ಹಾಗೂ ಪಂಚಾಯಿತಿಗಳಿಗೆ 100 ದಿನಗಳ ಒಳಗಾಗಿ ಚುನಾವಣೆ ನಡೆಸಬೇಕು ಎಂದು ಅದು ಹೇಳಿದೆ. ʼಒಂದು ರಾಷ್ಟ್ರ, ಒಂದು ಚುನಾವಣೆʼ ಪ್ರಸ್ತಾಪದ ಅನುಷ್ಠಾನಕ್ಕೆ ಸಂವಿಧಾನಕ್ಕೆ ಕನಿಷ್ಠ 18 ತಿದ್ದುಪಡಿಗಳನ್ನು ತರಬೇಕಿದೆ ಎಂದು ಹೇಳಲಾಗಿದೆ.
Next Story