ಮಹಾರಾಷ್ಟ್ರ | ಡಿಸಿಎಂ ಏಕನಾಥ್ ಶಿಂಧೆ ಕಾರು ಸ್ಪೋಟಿಸುವುದಾಗಿ ಬೆದರಿಕೆ

Photo | PTI
ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಾರನ್ನು ಸ್ಫೋಟಿಸುವುದಾಗಿ ಅನಾಮಧೇಯ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಮುಂಬೈ ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ.
ಗುರುವಾರ ಗೋರೆಗಾಂವ್ ಮತ್ತು ಜೆಜೆ ಮಾರ್ಗ ಪೊಲೀಸ್ ಠಾಣೆಗಳಿಗೆ ಮತ್ತು ರಾಜ್ಯ ಸರಕಾರದ ಕೇಂದ್ರ ಕಚೇರಿಯಾದ ಮಂತ್ರಾಲಯದ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಬೆದರಿಕೆ ಕರೆ ಹಿನ್ನೆಲೆ ಏಕನಾಥ್ ಶಿಂಧೆಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ʼಬೆದರಿಕೆ ಸಂದೇಶದ IP ವಿಳಾಸವನ್ನು ಟ್ರ್ಯಾಕ್ ಮಾಡಲಾಗುತ್ತಿದೆ. ಈ ಕುರಿತು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆʼ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.
Next Story