ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿಗಣತಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ| Photo: PTI
ನಾಗಪುರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.
ಕಾಂಗ್ರೆಸ್ ನ 139ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ಆಯೋಜಿಸಲಾಗಿದ್ದ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಕಳೆದ 40 ವರ್ಷಗಳಲ್ಲೇ ಅತ್ಯಧಿಕ ಮಟ್ಟಕ್ಕೆ ತಲುಪಿದೆ ಎಂದರು.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಚಾರವನ್ನು ಆರಂಭಿಸಿದ ‘ಹೈನ್ ತಯ್ಯಾರ್ ಹಮ್’ ಎಂದು ಕೂಡ ಕರೆಯಲಾದ ಈ ರ್ಯಾಲಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎರಡು ಸಿದ್ಧಾಂತಗಳ ನಡುವೆ ಯುದ್ಧವಿದೆ ಎಂದರು.
ಬಿಜೆಪಿಗಿಂತ ಭಿನ್ನವಾಗಿ ಕಿರಿಯ ಕಾಂಗ್ರೆಸ್ ಕಾರ್ಯಕರ್ತ ಕೂಡ ಪಕ್ಷದ ಉನ್ನತ ನಾಯಕರ ಅಭಿಪ್ರಾಯವನ್ನು ಒಪ್ಪದೇ ಇರಬಹುದು, ಅವರನ್ನು ಪ್ರಶ್ನಿಸಬಹುದು ಎಂದು ಅವರು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಹಾರಾಷ್ಟ್ರದ ಪಕ್ಷದ ಅನೇಕ ಉನ್ನತ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ರ್ಯಾಲಿಯಲ್ಲಿ ಪಾಲ್ಗೊಳ್ಳಲಿಲ್ಲ.