ವಾಯುಮಾಲಿನ್ಯ ಪ್ರಮಾಣದಲ್ಲಿನ ಏರಿಕೆಯ ಕಾರಣಕ್ಕೆ ಬೆಳಗಿನ ವಾಯು ವಿಹಾರವನ್ನು ಸ್ಥಗಿತಗೊಳಿಸಿದ್ದೇನೆ: ಸಿಜೆಐ ಚಂದ್ರಚೂಡ್
ಸಿಜೆಐ ಚಂದ್ರಚೂಡ್ | PC : PTI
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ತೀವ್ರ ಪ್ರಮಾಣದಲ್ಲಿ ಏರಿಕೆಯಾಗಿರುವ ವಾಯು ಮಾಲಿನ್ಯದ ಕಾರಣಕ್ಕೆ ನಾನು ಬೆಳಗಿನ ವಾಯು ವಿಹಾರಕ್ಕೆ ತೆರಳುವುದನ್ನು ಸ್ಥಗಿತಗೊಳಿಸಿದ್ದೇನೆ ಎಂದು ಗುರುವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಬಹಿರಂಗಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ಪತ್ರಕರ್ತರೊಂದಿಗೆ ಅನೌಪಚಾರಿಕೆ ಮಾತುಕತೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, ಉಸಿರಾಟದ ತೊಂದರೆಗೆ ತುತ್ತಾಗುವ ಬದಲು, ಮನೆಯಿಂದ ಹೊರಗೆ ಕಾಲಿಡದಿರುವುದೇ ಉತ್ತಮ ಎಂದು ನನ್ನ ವೈದ್ಯರು ನನಗೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ವಾಯುಮಾಲಿನ್ಯ ಪ್ರಮಾಣದಲ್ಲಿನ ಏರಿಕೆಯನ್ನು ಉಲ್ಲೇಖಿಸಿದ ಅವರು, “ನಾನು ಇಂದಿನಿಂದ (ಅಕ್ಟೋಬರ್ 24) ಬೆಳಗಿನ ವಾಯುವಿಹಾರಕ್ಕೆ ತೆರಳುವುದನ್ನು ನಿಲ್ಲಿಸಿದ್ದೇನೆ. ನಾನು ಸಾಮಾನ್ಯವಾಗಿ ಬೆಳಗ್ಗೆ 4ರಿಂದ 4.15 ಗಂಟೆ ವೇಳೆಗೆ ಬೆಳಗಿನ ವಾಯು ವಿಹಾರಕ್ಕೆ ತೆರಳುತ್ತಿದ್ದೆ” ಎಂದು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿನ ವಾಯು ಮಾಲಿನ್ಯ ಪ್ರಮಾಣ ಅಪಾಯಕಾರಿ ಮಟ್ಟವನ್ನು ಮೀರಿರುವ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಮೇಲಿನಂತೆ ಹೇಳಿಕೆ ನೀಡಿದ್ದಾರೆ.