ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 10 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, "ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು." ಎಂದು ಹೇಳಿದ್ದಾರೆ.
ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಭೂಷಣ್ ಹಾಗೂ ತೆಲಂಗಾಣ ಮೂಲದ ಸದ್ಯ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಮಧುಸೂದನ್ ರಾವ್ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ.
ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. #PahalgamTerroristAttack pic.twitter.com/IYNU4QflCl
— Siddaramaiah (@siddaramaiah) April 23, 2025