ಮೋದಿ ಧ್ಯಾನವನ್ನು ಟಿವಿಯಲ್ಲಿ ಪ್ರಸಾರ ಮಾಡಿದರೆ ಚುನಾವಣಾ ಆಯೋಗಕ್ಕೆ ದೂರು : ಮಮತಾ ಬ್ಯಾನರ್ಜಿ
ನರೇಂದ್ರ ಮೋದಿ , ಮಮತಾ ಬ್ಯಾನರ್ಜಿ | PTI
ಕೋಲ್ಕತಾ : ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಧ್ಯಾನವನ್ನು ಟಿವಿಯಲ್ಲಿ ಪ್ರಸಾರ ಮಾಡಿದರೆ ಅದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಮತ್ತು ತೃಣಮೂಲ ಕಾಂಗ್ರೆಸ್ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.
ಬರಿಯುಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು,ಮೋದಿ ಧ್ಯಾನ ಮಾಡಲಿ,ಆದರೆ ಅದನ್ನು ಟಿವಿಯಲ್ಲಿ ಪ್ರಸಾರ ಮಾಡುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಯಾರೇ ಆದರೂ ಧ್ಯಾನ ಮಾಡುವಾಗ ಕ್ಯಾಮೆರಾಗಳನ್ನು ಹೊತ್ತೊಯ್ಯುತ್ತಾರೆಯೇ ಎಂದು ಪ್ರಶ್ನಿಸಿದರು. ಇದು ಪ್ರಚಾರದ ಅಂತ್ಯ ಮತ್ತು ಮತದಾನದ ದಿನಾಂಕದ ನಡುವಿನ ಮೌನ ಅವಧಿಯಲ್ಲಿ ಪ್ರಚಾರವನ್ನು ಮಾಡುವ ತಂತ್ರವಾಗಿದೆ ಎಂದು ಹೇಳಿದರು.
ಈ ಬಾರಿ ಬಿಜೆಪಿ ಅಧಿಕಾರಕ್ಕೆ ಮರಳಿದರೆ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷ, ಚುನಾವಣೆಗಳು, ಸ್ವಾತಂತ್ರ್ಯ, ಧರ್ಮ, ಮಾನವೀಯತೆ ಮತ್ತು ಸಂಸ್ಕೃತಿ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಮಮತಾ ಹೇಳಿದರು.