ಬಿಹಾರ ಕಾಂಗ್ರೆಸ್ ಅಧ್ಯಕ್ಷರಾಗಿ ಶಾಸಕ ರಾಜೇಶ್ ಕುಮಾರ್ ನೇಮಕ
ಹೊಸ ದಿಲ್ಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಹಾರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ಸಂಸದ ಅಖಿಲೇಶ್ ಪ್ರಸಾದ್ ಬದಲಿಗೆ, ಶಾಸಕ ರಾಜೇಶ್ ಕುಮಾರ್ ರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಶಾಸಕ ರಾಜೇಶ್ ಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಬಿಹಾರ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಬಿಹಾರ ಕಾಂಗ್ರೆಸ್ ಘಟಕದ ಅಧ್ಯಕ್ಷ ಹುದ್ದೆಯಿಂದ ನಿರ್ಗಮಿಸುತ್ತಿರುವ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ಅವರು ಪಕ್ಷ ಸಂಘಟನೆಗೆ ನೀಡಿದ ಕೊಡುಗೆಯನ್ನು ಕಾಂಗ್ರೆಸ್ ಅಭಿನಂದಿಸಿದೆ.
Next Story