ಮನಮೋಹನ್ ಸಿಂಗ್ ಗೌರವಾರ್ಥ 7 ದಿನ ಕಾಂಗ್ರೆಸ್ನ ಎಲ್ಲಾ ಕಾರ್ಯಕ್ರಮ ರದ್ದು
ಡಾ. ಮನಮೋಹನ್ ಸಿಂಗ್ (PTI)
ಹೊಸದಿಲ್ಲಿ : ಡಾ. ಮನಮೋಹನ್ ಸಿಂಗ್ ಅವರ ಗೌರವಾರ್ಥ 7 ದಿನ ಕಾಂಗ್ರೆಸ್ನ ಎಲ್ಲಾ ಕಾರ್ಯಕ್ರಮ ರದ್ದಾಗಿದೆ.
ಮುಂದಿನ ಏಳು ದಿನಗಳಲ್ಲಿ ನಿಗದಿಯಾಗಿದ್ದ ಸ್ಥಾಪನಾ ದಿನ ಸೇರಿ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್ ತಿಳಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ‘ಎಲ್ಲಾ ಆಂದೋಲನ ಮತ್ತು ಪ್ರಚಾರ ಕಾರ್ಯಕ್ರಮಗಳೂ ರದ್ದು ಮಾಡಲಾಗಿದೆ. ಪಕ್ಷದ ಕಾರ್ಯಕ್ರಮಗಳು 3 ಜನವರಿ 2025 ರಂದು ಪುನರಾರಂಭಗೊಳ್ಳುತ್ತವೆ. ಈ ಶೋಕಾಚರಣೆಯ ಅವಧಿಯಲ್ಲಿ ಪಕ್ಷದ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ
‘ಮನಮೋಹನ ಸಿಂಗ್ ಅವರ ಗೌರವಾರ್ಥ ಕರ್ನಾಟಕದ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ರ್ಯಾಲಿಯನ್ನು ರದ್ದು ಮಾಡಲಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ – ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
As a mark of respect for the departed former Prime Minister, Dr Manmohan Singh ji, all official programmes of the Indian National Congress, including the Foundation Day celebrations stand canceled for the next seven days.
— K C Venugopal (@kcvenugopalmp) December 26, 2024
This includes all the agitational and outreach programs.…