ಕ್ರಿಕೆಟ್ ವಿಶ್ವಕಪ್ ಫೈನಲ್ :ಭಾರತದ ಸೋಲಿನಿಂದ ನೊಂದ ಯುವಕ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ | Photo ; PTI
ಬಂಕುರಾ: ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಎದುರು ಭಾರತದ ಸೋಲಿನಿಂದ ನೊಂದುಕೊಂಡಿದ್ದ ಎನ್ನಲಾದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪ.ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಸಂಭವಿಸಿದೆ.
ಬೆಲಿಯಾತೋರ ಪೋಲಿಸ್ ಠಾಣಾ ವ್ಯಾಪ್ತಿಯ ನಿವಾಸಿ ರಾಹುಲ್ ಲೋಹಾರ್ (23) ಮೃತ ಯುವಕನಾಗಿದ್ದು, ರವಿವಾರ ರಾತ್ರಿ 11 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ.
ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಲೋಹಾರ್ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ರವಿವಾರ ರಜೆ ಮಾಡಿದ್ದ. ಭಾರತದ ಸೋಲಿನಿಂದ ಹತಾಶನಾದ ಆತ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಜೀವನದಲ್ಲಿ ಯಾವುದೇ ಸಮಸ್ಯೆಗಳಿರಲಿಲ್ಲ ಎಂದು ಮೃತನ ಭಾವ ಉತ್ತಮ ಸೂರ್ ತಿಳಿಸಿದರು. ಲೋಹಾರ್ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.
ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story